ಬಂಟ್ವಾಳ ತಾಲೂಕಿನ ಪಿ.ಕೃಷ್ಣ ಭಟ್ ರಾಜ್ಯ ಹೈಕೋರ್ಟ್ ನ್ಯಾಯಾಧೀಶರು

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೋಡಪದವಿನ ಪಂಜಿಗದ್ದೆಯ ಪಿ.ಕೃಷ್ಣ ಭಟ್ ಅವರು ಹೈಕೋರ್ಟ್ ನ್ಯಾಯಾಧೀಶರಾಗಿದ್ದಾರೆ . ಕಳೆದ ವರ್ಷ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು. ಕೋಡಪದವು ಪಂಜಿಗದ್ದೆ ಸರವು ಮನೆಯ ಪಿ.ನಾರಾಯಣ ಭಟ್ ಮತ್ತು ಪರಮೇಶ್ವರಿ ದಂಪತಿಯ ನಾಲ್ವರು ಮಕ್ಕಳಲ್ಲಿ ಮೂರನೇಯವರಾಗಿ 1960ರ ಆಗಸ್ಟ್ 8ರಂದು ಜನಿಸಿದ ಭಟ್, ಅವರಿಗೆ ಓರ್ವ ಸಹೋದರಿ ಮತ್ತು ಇಬ್ಬರು ಸಹೋದರರು ಇದ್ದಾರೆ. ಕೋಡಪದವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸವನ್ನು ಪೂರೈಸಿ, ವಿಟ್ಲ ಜ್ಯೂನಿಯರ್ ಕಾಲೇಜಿನಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸವನ್ನು ಕೈಗೊಂಡರು. ಬಳಿಕ ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಪಿಯುಸಿ ಅಭ್ಯಸಿಸಿದ ಅವರು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಬಿಎಸ್ ಸಿ ಪದವಿಯನ್ನು ಪಡೆದರು. ಕಾನೂನು ವ್ಯಾಸಂಗದಲ್ಲಿ ಆಸಕ್ತಿ ಹೊಂದಿದ್ದ ಅವರು, ಬನಾರಸ್ ಹಿಂದು ವಿಶ್ವವಿದ್ಯಾನಿಲಯದಲ್ಲಿ ಕಾನೂನು ಪದವಿ ಪಡೆದು, ಮಂಗಳೂರಿನಲ್ಲಿ  1986ರಿಂದ 89ರವರೆಗೆ ಮೂರು ವರ್ಷ ವರ್ಷಗಳ ಕಾಲ ಹಿರಿಯ ನ್ಯಾಯವಾದಿ ನೂಯಿ ಶ್ರೀನಿವಾಸ ರಾವ್ ಜೊತೆ ವಕೀಲ ವೃತ್ತಿ ಕೈಗೊಂಡರು. 1989ರಿಂದ 1998ರವರೆಗೆ ಬೆಂಗಳೂರಿನಲ್ಲಿ ಹೈಕೋರ್ಟ್ ನ್ಯಾಯವಾದಿಯಾಗಿ  ವೃತ್ತಿ ನಿರ್ವಹಿಸಿದ್ದಾರೆ. 1998ರ ಜೂನ್ ನಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ನೇಮಕಗೊಂಡ ಅವರು, ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸಿದ್ದಾರೆ. ಬೆಂಗಳೂರಿನಲ್ಲಿ ರಿಜಿಸ್ಟ್ರಾರ್ ಜನರಲ್ ಆಗಿ, ಕರ್ನಾಟಕ ಜ್ಯೂಡಿಶಿಯಲ್ ಅಕಾಡೆಮಿಯ ಡೈರೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿರುತ್ತಾರೆ. ಬೆಂಗಳೂರಿನಲ್ಲಿ ಪತ್ನಿ, ಪುತ್ರ ಮತ್ತು ಪುತ್ರಿಯೊಂದಿಗೆ ವಾಸಿಸುತ್ತಿದ್ದಾರೆ.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳ ತಾಲೂಕಿನ ಪಿ.ಕೃಷ್ಣ ಭಟ್ ರಾಜ್ಯ ಹೈಕೋರ್ಟ್ ನ್ಯಾಯಾಧೀಶರು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*