ಬಂಟ್ವಾಳ: ಬಿ,ಮೂಡ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ ಅಂಗವಾಗಿ ಸಾರ್ವಜನಿಕ ಪರಿಸರ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ದೇಶದ ಬೃಹತ್ ಸಂಖ್ಯೆಯ ವಿದ್ಯಾರ್ಥಿ ಸಮುದಾಯದಲ್ಲಿ ನಾಯಕತ್ವ, ಸಾಮಾಜಿಕ ಕಾಳಜಿ, ಸ್ವಚ್ಚತಾ ಜಾಗೃತಿ ಇತ್ಯಾದಿ ಗುಣಗಳನ್ನು ಬೆಳೆಸುವ ಉದ್ದೇಶದಿಂದ ರಾಷ್ಟ್ರೀಯ ಸೇವಾ ಯೋಜನೆಯನ್ನು ಸರಕಾರ ಅನುಷ್ಟಾನಕ್ಕೆ ತಂದಿದೆ. ರಾಷ್ಟ್ರೀಯ ಸೇವಾ ಯೋಜನೆ ಜಾರಿಗೆ ಬಂದ ದಿನವನ್ನು ಸಾರ್ವಜನಿಕ ಪರಿಸರ ಸ್ವಚ್ಚತೆ ಮಾಡುವ ಮೂಲಕ ಆಚರಿಸುತ್ತಿರುವುದು ನಿಜಕ್ಕೂ ಅಭಿನಂದನೀಯ ಎಂದು ಬಿ.ಮೂಡ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಯೂಸುಫ್ ವಿಟ್ಲ ಈ ಸಂದರ್ಭ ಅಭಿಪ್ರಾಯಪಟ್ಟರು.
ಕಾಲೇಜಿನ ಎನ್ ಎಸ್ ಎಸ್ ಯೋಜನಾಧಿಕಾರಿ ಬಾಲಕೃಷ್ಣ ನಾಯ್ಕ್ ಕೆ ಸ್ವಾಗತಿಸಿದರು. ಉಪನ್ಯಾಸಕ ಅರುಣ್ ಕುಮಾರ್ ವಂದಿಸಿದರು. ಉಪನ್ಯಾಸಕ ಅಬ್ದುಲ್ ರಝಾಕ್ ಕಾರ್ಯಕ್ರಮ ಸಂಯೋಜಿಸಿದರು.