





ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ತಿದ್ದುಪಡಿ ಕಾಯ್ದೆ, ಜನವಿರೋಧಿ ವಿದ್ಯುತ್ ಮಸೂದೆ, ಭೂಸುಧಾರಣಾ ಕಾಯ್ದೆ ತಿದ್ದುಪಡಿ, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ, ಮುಂತಾದವುಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೆಪ್ಟೆಂಬರ್ 27 ರಂದು ಕರೆ ನೀಡಿದ ಭಾರತ್ ಬಂದ್ ಗೆ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಬೆಂಬಲ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ತರ ಪರ ಬೆಂಬಲವಾಗಿ ಎಸ್ಡಿಪಿಐ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಸೆಪ್ಟೆಂಬರ್ 27ರಂದು ಬೆಳಿಗ್ಗೆ 10 ಗಂಟೆಗೆ ಬಿಸಿರೋಡ್ ಕೈಕಂಬ ಜಂಕ್ಷನ್ ನಲ್ಲಿ ಬೀದಿನಾಟಕ ಮತ್ತು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಸಮಾನ ಮನಸ್ಕ ಸಂಘಟನೆಗಳು, ಕಾರ್ಮಿಕರು, ಪ್ರಗತಿಪರರು ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಕ್ಷೇತ್ರ ಸಮಿತಿ ಕಾರ್ಯದರ್ಶಿ ಮುನೀಶ್ ಅಲಿ ಬಂಟ್ವಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Be the first to comment on "ಭಾರತ ಬಂದ್ ಗೆ ಎಸ್.ಡಿ.ಪಿ.ಐ. ಬೆಂಬಲ, 27ರಂದು ಪ್ರತಿಭಟನೆ"