Uncategorized

ಬಂಟ್ವಾಳದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಕೇಂದ್ರ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾನಿರತರು

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಬೆಂಬಲ ಸೂಚಿಸಿದ ಮಾಜಿ ಸಚಿವ ರೈ

1 / 7

ಬಂಟ್ವಾಳ: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ವಿವಿಧ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್‌ಗೆ ಬೆಂಬಲ ಸೂಚಿಸಿ ದ.ಕ.ಜಿಲ್ಲಾ ರೈತ, ದಲಿತ, ಕಾರ್ಮಿಕ, ಜನಪರ ಚಳುವಳಿಗಳ ಒಕ್ಕೂಟದ ವತಿಯಿಂದ ಬಂಟ್ವಾಳದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿ ಸೋಮವಾರ ಸಾಂಕೇತಿಕವಾಗಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಲಾಯಿತು. ಈ ಸಂದರ್ಭ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗಲಾಯಿತು.ಆರಂಭದಲ್ಲಿ ಬಿ.ಸಿ.ರೋಡಿನ ಮಿನಿ ವಿಧಾನಸೌಧದ ಬಳಿಯಿಂದ ನಾರಾಯಣ ಗುರು ವೃತ್ತದವರೆಗೆ ಜಾಥಾ ನಡೆಯಿತು. ಹೋರಾಟಗಾರ ಕೃಷ್ಣಪ್ಪ ಸಾಲಿಯಾನ್ ಅಧ್ಯಕ್ಷತೆ ವಹಿಸಿದ್ದರು. ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮಾತನಾಡಿಸರಕಾರಗಳ ರೈತ ವಿರೋಧಿ ನೀತಿಯಿಂದಾಗಿ ಕೃಷಿಕರು ನಷ್ಟಕ್ಕೊಳಗಾಗುವ ಜತೆಗೆ ಸಾವಿರಾರು ಮಂದಿ ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ ಎಂದರು.

ಇದೇ ವೇಳೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮಾಜಿ ಸಚಿವ ಬಿ.ರಮಾನಾಥ ರೈ, ಪ್ರತಿಭಟನೆಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದರು. ವಿವಿಧ ಸಂಘಟನೆಗಳ ಮುಖಂಡರಾದ ಯಾದವ ಶೆಟ್ಟಿ, ಸುನಿಲ್ ಕುಮಾರ್ ಬಜಾಲ್, ಪ್ರಕಾಶ್ ಶೆಟ್ಟಿ ಶ್ರೀಶೈಲ, ಶಬೀರ್ ಅಹಮದ್, ದಿವಾಕರ್, ಕೃಷ್ಣಪ್ಪ, ರಘು ಎಕ್ಕಾರ್, ರಮೇಶ್ ಕೋಟ್ಯಾನ್, ಶಿವಕುಮಾರ್, ಸೇಸಪ್ಪ ಬೆದ್ರಕಾಡು, ಭಾರತಿ, ಸನ್ನಿ ಡಿಸೋಜ, ಓಲ್ವಿನ್ ಮಿನೇಜಸ್, ದಿವಾಕರ ಮಜಿಗುಂಡಿ, ರೋಯ್ ಕಾರ್ಲೊ, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಅಬ್ಬಾಸ್ ಆಲಿ, ಚಂದ್ರಪ್ರಕಾಶ್ ಶೆಟ್ಟಿ, ಸದಾಶಿವ ಬಂಗೇರ, ರಾಮಣ್ಣ ವಿಟ್ಲ, ಅಶೋಕ್ ಕೊಂಚಾಡಿ, ಹರಿದಾಸ್ ಭಟ್, ಸದಾಶಿವ ಬಂಗೇರ, ರಾಜಾ ಚಂಡ್ತಿಮಾರ್, ಚಂದ್ರಶೇಖರ ಪೂಜಾರಿ, ಸುದರ್ಶನ ಜೈನ್, ಸೀತಾರಾಮ ಶೆಟ್ಟಿ ಕಾಂತಾಡಿ, ಮಧುಸೂದನ್ ಶೆಣೈ, ರಾಮಣ್ಣ ವಿಟ್ಲ, ತುಳಸೀದಾಸ್ ವಿಟ್ಲ, ಸುರೇಶ್ ಕುಮಾರ್, ಕರುಣಾಕರ್, ಭಾರತಿ ಶಂಭೂರು ಮೊದಲಾದವರು ಪಾಲ್ಗೊಂಡಿದ್ದರು. ರಾಜ್ಯ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಪ್ರಸ್ತಾವನೆಗೈದರು. ಜಿಲ್ಲಾ ಕಾರ್ಯದರ್ಶಿ ಪ್ರೇಮನಾಥ ಶೆಟ್ಟಿ ಬಾಳ್ತಿಲ ಸ್ವಾಗತಿಸಿದರು. ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಫೆರ್ನಾಂಡೀಸ್ ಕಾರ್ಯಕ್ರಮ ನಿರ್ವಹಿಸಿದರು.  ಬಂಟ್ವಾಳ ಪೊಲೀಸರು ಬಂದೋಬಸ್ತ್ ವಹಿಸಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ