ಬಂಟ್ವಾಳ: ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ (ಇಒ) ರಾಜಣ್ಣ ಮಾಣಿ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ ತ್ಯಾಜ್ಯ ನಿರ್ವಹಣೆಯ ಬಗ್ಗೆ ವಿಶೇಷ ಸಭೆ ನಡೆಸಿದರು.
ಅಧ್ಯಕ್ಷತೆ ವಹಿಸಿದ್ದ ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಸಿದ್ಧಪಡಿಸಿರುವ ರೂಪುರೇಶೆ ಮತ್ತು ಮುಂದಿನ ಕಾರ್ಯಚಟುವಟಿಕೆಗಳ ಬಗ್ಗೆ ವಿವರಿಸಿದರು. ಗಾಂಧಿ ಜಯಂತಿಯ ದಿನ ತ್ಯಾಜ್ಯ ನಿರ್ವಹಣೆಯ ಕಾರ್ಯಕ್ಕೆ ವಿಶೇಷ ಚಾಲನೆ ನೀಡಲಾಗುವುದು ಎಂದು ಹೇಳಿದರು.
ಮಾಣಿ ಗ್ರಾಮ ಪಂಚಾಯತ್ ಸದಸ್ಯರುಗಳಾದ ಸುದೀಪ್ ಕುಮಾರ್ ಶೆಟ್ಟಿ, ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ನಾರಾಯಣ ಶೆಟ್ಟಿ ತೋಟ, ಪೆರಾಜೆ ಪಂಚಾಯತ್ ಉಪಾಧ್ಯಕ್ಷ ಉಮ್ಮರ್, ಪಿಡಿಓ ಶಂಭು ಕುಮಾರ್ ಶರ್ಮಾ, ನೆಟ್ಲಮುಡ್ನೂರು ಪಿಡಿಓ ನಾರಾಯಣ ಗಟ್ಟಿ, ಬರಿಮಾರು ಪಿಡಿಓ ಲಕ್ಷ್ಮಣ್ ಉಪಸ್ಥಿತರಿದ್ದರು. ಮಾಣಿ ಗ್ರಾಮ ಪಂಚಾಯತ್ ಪಿಡಿಓ ಗಿರಿಜಾ ಸ್ವಾಗತಿಸಿದರು.
Be the first to comment on "ಮಾಣಿ ಗ್ರಾಪಂಗೆ ತಾಪಂ ಇಒ ಭೇಟಿ, ತ್ಯಾಜ್ಯ ನಿರ್ವಹಣೆ ಕುರಿತ ವಿಶೇಷ ಸಭೆ"