ಅಕ್ಟೋಬರ್ 1ರಂದು ಕಾವಳಮುಡೂರಿನಲ್ಲಿ ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಅಭಿಯಾನ

ಪ್ಲಾಸ್ಟಿಕ್ ಸಂಗ್ರಹಿಸಿ ತರುವ ಗ್ರಾಮಸ್ಥರಿಗೆ ಪತ್ರಕರ್ತರ ಸಂಘದಿಂದ ಬಹುಮಾನ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬಂಟ್ವಾಳ ತಾಲೂಕು ಪತ್ರಕರ್ತರ ಸಹಭಾಗಿತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್,ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ  ,ಕಾವಳಮುಡೂರು ಗ್ರಾಮ ಪಂಚಾಯತ್ ಸಹಯೋಗದಲ್ಲಿ ಸ್ವಚ್ಛ ಭಾರತ್ ಅಭಿಯಾನದಡಿಯಲ್ಲಿ ಪ್ಲಾಸ್ಟಿಕ್ ಬಳಕೆ  ವಿರುದ್ಧ ಜಾಗೃತಿ  ಅಭಿಯಾನ ಅಕ್ಟೋಬರ್ 1 ರಂದು ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಬೆಳಿಗ್ಗೆ  11 ಗಂಟೆಗೆ  ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೆರವೇರಿಸಲಿದ್ದಾರೆ . ಕಾವಳಮೂಡೂರು ಗ್ರಾಮ ಪಂಚಾಯತ್ ಅಧ್ಯಕ್ಷೆ  ಜಯಲಕ್ಷ್ಮಿ ಅಧ್ಯಕ್ಷತೆ ವಹಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಅವರು ಪ್ಲಾಸ್ಟಿಕ್ ತಂದು ಕೊಡುವ ಗ್ರಾಮಸ್ಥರಿಗೆ  ಅಕ್ಕಿ ವಿತರಣೆ ಮಾಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ,  ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್ ಎಚ್ ಜಿ , ಬಂಟ್ವಾಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪೂಂಜಾಲಕಟ್ಟೆ, ಕಾವಳಮೂಡೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಚನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ . ಬೆಳಿಗ್ಗೆ 10 ಗಂಟೆಗೆ  ಎನ್ ಸಿ ರೋಡ್ ನಿಂದ ಸ್ವಚ್ಛ ರಥ ಕ್ಕೆ ಚಾಲನೆ ದೊರೆಯಲಿದೆ . ಪತ್ರಕರ್ತ ಮೌನೇಶ್ ವಿಶ್ವಕರ್ಮ ಅವರ ನಿರ್ದೇಶನದಲ್ಲಿ ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ  ಮೂಡಿಸುವ ರೂಪಕ ಇದೇ ಸಂದರ್ಭ ನಡೆಯಲಿದೆ . ಪ್ಲಾಸ್ಟಿಕ್ ಸಂಗ್ರಹಿಸಿ ತರುವ ಗ್ರಾಮಸ್ಥರಿಗೆ ಪತ್ರಕರ್ತರ ಸಂಘದ ವತಿಯಿಂದ ಅಕ್ಕಿ ವಿತರಣೆ ಮಾಡಲಾಗುವುದು ಎಂದು ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಅಕ್ಟೋಬರ್ 1ರಂದು ಕಾವಳಮುಡೂರಿನಲ್ಲಿ ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಅಭಿಯಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*