ಪ್ಲಾಸ್ಟಿಕ್ ಸಂಗ್ರಹಿಸಿ ತರುವ ಗ್ರಾಮಸ್ಥರಿಗೆ ಪತ್ರಕರ್ತರ ಸಂಘದಿಂದ ಬಹುಮಾನ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬಂಟ್ವಾಳ ತಾಲೂಕು ಪತ್ರಕರ್ತರ ಸಹಭಾಗಿತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್,ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆ ,ಕಾವಳಮುಡೂರು ಗ್ರಾಮ ಪಂಚಾಯತ್ ಸಹಯೋಗದಲ್ಲಿ ಸ್ವಚ್ಛ ಭಾರತ್ ಅಭಿಯಾನದಡಿಯಲ್ಲಿ ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಅಭಿಯಾನ ಅಕ್ಟೋಬರ್ 1 ರಂದು ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೆರವೇರಿಸಲಿದ್ದಾರೆ . ಕಾವಳಮೂಡೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಲಕ್ಷ್ಮಿ ಅಧ್ಯಕ್ಷತೆ ವಹಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಅವರು ಪ್ಲಾಸ್ಟಿಕ್ ತಂದು ಕೊಡುವ ಗ್ರಾಮಸ್ಥರಿಗೆ ಅಕ್ಕಿ ವಿತರಣೆ ಮಾಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್ ಎಚ್ ಜಿ , ಬಂಟ್ವಾಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪೂಂಜಾಲಕಟ್ಟೆ, ಕಾವಳಮೂಡೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಚನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ . ಬೆಳಿಗ್ಗೆ 10 ಗಂಟೆಗೆ ಎನ್ ಸಿ ರೋಡ್ ನಿಂದ ಸ್ವಚ್ಛ ರಥ ಕ್ಕೆ ಚಾಲನೆ ದೊರೆಯಲಿದೆ . ಪತ್ರಕರ್ತ ಮೌನೇಶ್ ವಿಶ್ವಕರ್ಮ ಅವರ ನಿರ್ದೇಶನದಲ್ಲಿ ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಮೂಡಿಸುವ ರೂಪಕ ಇದೇ ಸಂದರ್ಭ ನಡೆಯಲಿದೆ . ಪ್ಲಾಸ್ಟಿಕ್ ಸಂಗ್ರಹಿಸಿ ತರುವ ಗ್ರಾಮಸ್ಥರಿಗೆ ಪತ್ರಕರ್ತರ ಸಂಘದ ವತಿಯಿಂದ ಅಕ್ಕಿ ವಿತರಣೆ ಮಾಡಲಾಗುವುದು ಎಂದು ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.