ರಾಜ್ಯದ ಒಟ್ಟು 13 ಮಂದಿಗೆ ಈ ಆಹ್ವಾನ ಗೌರವ





ಬಂಟ್ವಾಳ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ವಚ್ಛ ಭಾರತ ಮಿಷನ್ 2.0 ಕಾರ್ಯಕ್ರಮದ ಉದ್ಘಾಟನೆ ಹಾಗೂ ಅಮೃತ ಯೋಜನೆ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಅಕ್ಟೋಬರ್ 1ರಂದು ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲೆಯ ಬಂಟ್ವಾಳ ಪುರಸಭೆ ಅಧ್ಯಕ್ಷ ಮಹಮ್ಮದ್ ಶರೀಫ್ ಮತ್ತು ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ಅವರನ್ನು ಕೇಂದ್ರ ಸರ್ಕಾರ ಆಹ್ವಾನಿಸಿದೆ.

ನವದೆಹಲಿಯ ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿರುವ ಕಾರ್ಯಕ್ರಮದಲ್ಲಿ ರಾಜ್ಯದ 13 ಮಂದಿಯನ್ನು ಆಹ್ವಾನಿಸಲಾಗಿದ್ದು, ಅವರ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಬಂಟ್ವಾಳವೂ ಒಂದು.

Be the first to comment on "ನವದೆಹಲಿಯ ಸ್ವಚ್ಛ ಭಾರತ್ ಮಿಷನ್ ಕಾರ್ಯಕ್ರಮಕ್ಕೆ ಬಂಟ್ವಾಳ ಪುರಸಭೆ ಅಧ್ಯಕ್ಷ, ಸಿಒಗೆ ಆಹ್ವಾನ"