![](https://i0.wp.com/bantwalnews.com/wp-content/uploads/2021/09/WhatsApp-Image-2021-08-31-at-18.02.39.jpeg?resize=777%2C963&ssl=1)
![](https://i0.wp.com/bantwalnews.com/wp-content/uploads/2021/07/aaniya-darbar.jpeg?resize=456%2C640&ssl=1)
![](https://i0.wp.com/bantwalnews.com/wp-content/uploads/2021/09/WhatsApp-Image-2021-09-29-at-08.29.26.jpeg?resize=723%2C1024&ssl=1)
![](https://i0.wp.com/bantwalnews.com/wp-content/uploads/2021/01/Bantwalnews-1.jpg?resize=777%2C392&ssl=1)
ಬಂಟ್ವಾಳ: ಗಾಂಧೀಜಿ ಜನ್ಮದಿನಾಚರಣೆ ಪ್ರಯುಕ್ತ ತಹಶೀಲ್ದಾರ್ ರಶ್ಮಿ. ಎಸ್.ಆರ್ ನೇತೃತ್ವದಲ್ಲಿ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಸ್ವಚ್ಚತಾ ಕಾರ್ಯ ನೆರವೇರಿತು.
ಸ್ವತಃ ತಹಸೀಲ್ದಾರ್ ಸಿಬ್ಬಂದಿಯೊಂದಿಗೆ ಈ ಕಾರ್ಯದಲ್ಲಿ ಪಾಲ್ಗೊಂಡರು. ಕಂದಾಯ ಇಲಾಖೆಯ ಪ್ರತಿಯೊಬ್ಬರ ಸಹಕಾರದಿಂದ ಕಾರ್ಯಕ್ರಮಗಳನ್ನು ಆಯೋಜಿಸಲು ಸಾಧ್ಯವಾಗಿದೆ ಎಂದ ಅವರ ಬಳಿಕ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ನಮ್ಮ ಪ್ರತಿ ಹೆಜ್ಜೆಯಲ್ಲಿ ಗಾಂಧೀಜಿಯ ತತ್ವಗಳನ್ನು ಅಳವಡಿಸಿಕೊಂಡು ಹೋಗಬೇಕು. ಗಾಂಧೀಜಿಯವರು ಬ್ರಿಟಿಷರ ವಿರುದ್ಧ ಹೊರಾಡುವುದರ ಜೊತೆಗೆ ಭಾರತೀಯ ಸಮಾಜದಲ್ಲಿದ್ದ ಪಿಡುಗುಗಳನ್ನು ನಿವಾರಿಸಲು ಪ್ರಯತ್ನಿಸಿದರು ಎಂದರು.ಇದೇ ಸಂದರ್ಭ ಕೇಂದ್ರ ಸ್ಥಾನಿಯ ಶಿರಸ್ತೇದಾರ್ ನರೇಂದ್ರನಾಥ ಭಟ್ ಮಿತ್ತೂರು, ಉಪತಹಸೀಲ್ದಾರ್ ರಾಜೇಶ್ ನಾಯ್ಕ್, ಶಿರಸ್ತೇದಾರ್ ದಿವಾಕರ ಮುಗುಳಿಯ. ಪ್ರಭಾರ ಕಂದಾಯ ನಿರೀಕ್ಷಕರಾದ ಧರ್ಮಸಾಮ್ರಾಜ್ಯ, ಮಂಜುನಾಥ್ ಕೆ.ಎಚ್, ಕುಮಾರ ಟಿ.ಸಿ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಲೆಕ್ಕಾಧಿಕಾರಿ ಗ್ರಾಮ ಸಹಾಯಕರು ಉಪಸ್ಥಿತರಿದ್ದರು.ಚುನಾವಣೆ ಶಿರಸ್ತೇದಾರ್ ನವೀನ್ ಬೆಂಜನಪದವು ಸ್ವಾಗತಿಸಿ ವಂದಿಸಿದರು.
Be the first to comment on "ಗಾಂಧೀ ಜಯಂತಿ ಹಿನ್ನೆಲೆ: ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಸ್ವಚ್ಛತಾ ಕಾರ್ಯ"