ಗಾಂಧೀ ಜಯಂತಿ ಹಿನ್ನೆಲೆ: ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಸ್ವಚ್ಛತಾ ಕಾರ್ಯ

ಬಂಟ್ವಾಳ: ಗಾಂಧೀಜಿ ಜನ್ಮದಿನಾಚರಣೆ ಪ್ರಯುಕ್ತ ತಹಶೀಲ್ದಾರ್ ರಶ್ಮಿ. ಎಸ್.ಆರ್ ನೇತೃತ್ವದಲ್ಲಿ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಸ್ವಚ್ಚತಾ ಕಾರ್ಯ ನೆರವೇರಿತು.

ಸ್ವತಃ ತಹಸೀಲ್ದಾರ್ ಸಿಬ್ಬಂದಿಯೊಂದಿಗೆ ಈ ಕಾರ್ಯದಲ್ಲಿ ಪಾಲ್ಗೊಂಡರು. ಕಂದಾಯ ಇಲಾಖೆಯ ಪ್ರತಿಯೊಬ್ಬರ ಸಹಕಾರದಿಂದ ಕಾರ್ಯಕ್ರಮಗಳನ್ನು ಆಯೋಜಿಸಲು ಸಾಧ್ಯವಾಗಿದೆ ಎಂದ ಅವರ ಬಳಿಕ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ನಮ್ಮ ಪ್ರತಿ ಹೆಜ್ಜೆಯಲ್ಲಿ  ಗಾಂಧೀಜಿಯ  ತತ್ವಗಳನ್ನು ಅಳವಡಿಸಿಕೊಂಡು ಹೋಗಬೇಕು.  ಗಾಂಧೀಜಿಯವರು ಬ್ರಿಟಿಷರ ವಿರುದ್ಧ ಹೊರಾಡುವುದರ ಜೊತೆಗೆ ಭಾರತೀಯ ಸಮಾಜದಲ್ಲಿದ್ದ ಪಿಡುಗುಗಳನ್ನು ನಿವಾರಿಸಲು ಪ್ರಯತ್ನಿಸಿದರು ಎಂದರು.ಇದೇ ಸಂದರ್ಭ ಕೇಂದ್ರ ಸ್ಥಾನಿಯ ಶಿರಸ್ತೇದಾರ್ ನರೇಂದ್ರನಾಥ ಭಟ್ ಮಿತ್ತೂರು, ಉಪತಹಸೀಲ್ದಾರ್ ರಾಜೇಶ್ ನಾಯ್ಕ್, ಶಿರಸ್ತೇದಾರ್ ದಿವಾಕರ ಮುಗುಳಿಯ. ಪ್ರಭಾರ ಕಂದಾಯ ನಿರೀಕ್ಷಕರಾದ ಧರ್ಮಸಾಮ್ರಾಜ್ಯ, ಮಂಜುನಾಥ್ ಕೆ.ಎಚ್,  ಕುಮಾರ ಟಿ.ಸಿ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಲೆಕ್ಕಾಧಿಕಾರಿ ಗ್ರಾಮ ಸಹಾಯಕರು ಉಪಸ್ಥಿತರಿದ್ದರು.ಚುನಾವಣೆ ಶಿರಸ್ತೇದಾರ್ ನವೀನ್ ಬೆಂಜನಪದವು ಸ್ವಾಗತಿಸಿ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಗಾಂಧೀ ಜಯಂತಿ ಹಿನ್ನೆಲೆ: ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಸ್ವಚ್ಛತಾ ಕಾರ್ಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*