ಪುಂಜಾಲಕಟ್ಟೆ

ಭಾರಿ ಗಾಳಿ- ಬಂಟ್ವಾಳ ತಾಲೂಕಿನಲ್ಲಿ ಹಲವೆಡೆ ಮನೆ, ಕೃಷಿಗೆ ಹಾನಿ

  • ತೆಂಕಕಜೆಕಾರು, ಬಡಗಕಜೆಕಾರು, ಪಾಂಡವರಕಲ್ಲು, ಉಳಿ, ಕಾವಳಮುಡೂರು ಪರಿಸರದಲ್ಲಿ ಹಾನಿ
ಅಪೂರ್ವ ಜ್ಯುವೆಲರ್ಸ್, ಬಿ.ಸಿ.ರೋಡ್, ಬಸ್. ನಿಲ್ದಾಣದ ಬಳಿ.

ಬಂಟ್ವಾಳ: ಶನಿವಾರ ಸಂಜೆ ಬಂಟ್ವಾಳ ತಾಲೂಕಿನ ಕೆಲ ಗ್ರಾಮಗಳಲ್ಲಿ ಬಿರುಗಾಳಿ, ಮಳೆಗೆ ಒಟ್ಟು 86 ಮನೆಗಳ ಸಹಿತ ಕೃಷಿ ಭೂಮಿಗಳಿಗೆ ಹಾನಿಯಾಗಿದೆ. ಹಾನಿಗೊಳಗಾದ ಪ್ರದೇಶಗಳಿಗೆ ಭಾನುವಾರ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.  ಒಟ್ಟು 77 ಮನೆಗಳಿಗೆ ಭಾಗಶಃ ಹಾನಿಯಾಗಿದ್ದರೆ, 9 ಮನೆಗಳಿಗೆ ತೀವ್ರ ಹಾನಿಯಾಗಿದೆ. ಬಡಗ ಹಾಗೂ ತೆಂಕ ಕಜೆಕಾರು ಪ್ರದೇಶಗಳಲ್ಲಿ 65 ಮನೆಗಳಿಗೆಭಾಗಶಃ ಹಾನಿ, 8 ಮನೆಗಳಿಗೆ ತೀವ್ರ ಹಾನಿಯಾದರೆ, ಉಳಿಯಲ್ಲಿ 1 ಮನೆಗೆ ತೀವ್ರ ಹಾನಿ, 7 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಕಾವಳಮುಡೂರು ಗ್ರಾಮದಲ್ಲಿ 5 ಮನೆಗಳಿಗೆ ಹಾನಿಯಾಗಿದೆ ಎಂದು ಪ್ರಭಾರ ಕಂದಾಯ ನಿರೀಕ್ಷಕ ಕುಮಾರ್ ಟಿ.ಸಿ. ತಿಳಿಸಿದ್ದಾರೆ. ತಾಲೂಕಿನ ತೆಂಕಕಜೆಕಾರು, ಬಡಗಕಜೆಕಾರು, ಉಳಿ, ಕಾವಳಮುಡೂರು ಸಹಿತ ಸುತ್ತಮುತ್ತಲಿನ ಕೆಲ ಗ್ರಾಮಗಳಲ್ಲಿ ಬಿರುಗಾಳಿ ಆರ್ಭಟ ತೋರಿತು. ನೂರಾರು ಅಡಕೆ, ತೆಂಗು, ಬಾಳೆ, ರಬ್ಬರ್ ಗಿಡ, ಮರಗಳು ಧರಾಶಾಹಿಯಾಗಿವೆ. ನೆಲ್ಲಿಗುಡ್ಡೆ, ಅಗರ್ತ್ಯಾರು,ಮುಚ್ಚಿರೋಡಿ ಪ್ರದೇಶಗಳಲ್ಲಿ ಕೃಷಿ ಹಾನಿಗಳು ಸಂಭವಿಸಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ