ಬಂಟ್ವಾಳ

ಬಿಜೆಪಿ ಮಂಚಿ ಶಕ್ತಿ ಕೇಂದ್ರದ ವತಿಯಿಂದ ಹಿರಿಯ ಕಾರ್ಯಕರ್ತರ ಸನ್ಮಾನ

EDITED AND OWNED BY – HARISH MAMBADY. For Advertisements, News Contact Watsapp No: 9448548127

ಬಂಟ್ವಾಳ: ಬಿಜೆಪಿ ಮಂಚಿ ಶಕ್ತಿ ಕೇಂದ್ರ ವತಿಯಿಂದ ಕುಕ್ಕಾಜೆ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದಲ್ಲಿ ಹಿರಿಯ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಜನ್ಮದಿನದ ಸೇವೆ ಹಾಗೂ ಸಮರ್ಪಣಾ ಕಾರ್ಯಕ್ರಮದ ಅಂಗವಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಜನಸಂಘ, ಬಿಜೆಪಿಯಲ್ಲಿ ಸೇವೆ ಸಲ್ಲಿಸಿದ ಹಿರಿಯ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು.

ಉದಯನಾರಾಯಣ ಭಟ್ ಖಂಡಿಗ, ಗಣೇಶ್ ಐತಾಳ್ ಚೌಕದಪಾಲು, ವಿಠ್ಠಲ ಪ್ರಭು ಪತ್ತುಮುಡಿ, ರವೀಂದ್ರ ಶೆಟ್ಟಿ ಕುಕ್ಕಾಜೆ, ಸಂಜೀವ ಆಚಾರ್ಯ ಕುಕ್ಕಾಜೆ, ವೆಂಕಟರಮಣ ಆಚಾರ್ಯ ನೂಜಿಪ್ಪಾಡಿ, ಗೋವಿಂದ ನಾಯಕ್ ನೂಜಿ, ಜಯದೇವ ಭಟ್ ನೂಜಿ, ಉಮೇಶ್ ನಾಯಕ್ ಪುಚ್ಚೆಕೆರೆ, ಕೃಷ್ಣಪ್ಪ ಬೆಳ್ಚಡ ಚೌಕದಪಾಲು, ನಾರಾಯಣ ಖಂಡಿಗ, ಗಣಪತಿ ಭಟ್ ಪುಚ್ಚೆಕೆರೆ ಇವರನ್ನು ಗೌರವಿಸಲಾಯಿತು. ಬಂಟ್ವಾಳ ಮಂಡಲ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಮಂಡಲದ ಉಪಾಧ್ಯಕ್ಷರಾದ ಜಯರಾಮ ನಾಯ್ಕ ಕುಂಟ್ರಕಲ, ಜಿಲ್ಲಾ ಸಮಿತಿ ಆಹ್ವಾನಿತ ಸದಸ್ಯರಾದ ಮಾಧವ ಮಾವೆ, ಕೊಳ್ನಾಡು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ  ಶಿವಪ್ರಸಾದ್ ಶೆಟ್ಟಿ ಕರೋಪಾಡಿ, ಪ್ರಧಾನ ಕಾರ್ಯದರ್ಶಿ ಲೋಹಿತ್ ಅಗರಿ, ಶಕ್ತಿ ಕೇಂದ್ರದ ಪ್ರಭಾರಿಗಳಾದ ನಂದರಾಮ ರೈ, ಅಶ್ವಥ್ ಬಾಳಿಕೆ, ಮಂಚಿ ಗ್ರಾಮ ಪಂಚಾಯತ್ ಅಧ್ಯಕ್ಷೆ  ಪುಷ್ಪಾ ಎಸ್ ಕಾಮತ್,  ಮಂಚಿ ಪಂಚಾಯತ್ ಉಪಾಧ್ಯಕ್ಷರಾದ ಮೋಹನ್ ದಾಸ್ ಶೆಟ್ಟಿ, ರೈತ ಮೋರ್ಚಾದ ಪ್ರಶಾಂತ್ ಶೆಟ್ಟಿ ಅಗರಿ ಉಪಸ್ಥಿತರಿದ್ದರು.

ಜಾಹೀರಾತು

ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಕೇಶವರಾವ್ ನೂಜಿಪ್ಪಾಡಿ ವಂದಿಸಿದರು. ಶಕ್ತಿ ಕೇಂದ್ರ ದ ಸಹಪ್ರಮುಖ್ ರಮೇಶ್ ರಾವ್ ಪತ್ತುಮುಡಿ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭ ಪಂಚಾಯತ್ ಸದಸ್ಯರು, ಬೂತ್ ಅಧ್ಯಕ್ಷರುಗಳು, ಬೂತ್ ಕಾರ್ಯದರ್ಶಿಗಳು, ಬೂತ್ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಅಶ್ವಥ್ ರಾವ್ ಬಾಳಿಕೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts