



ಬಂಟ್ವಾಳ: ತೆಂಕಬೆಳ್ಳೂರು ಗ್ರಾಮದ ಬೆಳ್ಳೂರು ಶ್ರೀ ಕಾವೇಶ್ವರ ದೇವಸ್ಥಾನದ ರಥಬೀದಿಗೆ 1.75 ಕೋ.ರೂ.ವೆಚ್ಚದ ಕಾಂಕ್ರೀಟ್ ಕಾಮಗಾರಿಗೆ ಗುರುವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶಿಲಾನ್ಯಾಸ ನೆರವೇರಿಸಿದರು.
ಗ್ರಾಮದಲ್ಲಿ ಪ್ರಾಕೃತಿಕ ವಿಕೋಪದಿಂದ ಮನೆ ಕುಸಿದು ಹಾನಿಗೊಳಗಾದ 2 ಕುಟುಂಬಗಳಿಗೆ ಶಾಸಕರು ಪರಿಹಾರ ಧನದ ಚೆಕ್ ವಿತರಿಸಿದರು.
ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಬಡಗಬೆಳ್ಳೂರು ಗ್ರಾ.ಪಂ.ಅಧ್ಯಕ್ಷ ಜಿ.ಪ್ರಕಾಶ್ ಆಳ್ವ, ಉಪಾಧ್ಯಕ್ಷೆ ಮಮತಾ, ಸದಸ್ಯರು, ಬಿಜೆಪಿಯ ಪ್ರಮುಖ ನಾಯಕರು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಕಾರ್ಯಪಾಲಕ ಎಂಜಿನಿಯರ್ ಪ್ರಭಾಕರ್ ಟಿ.ಎಂ, ಕಿರಿಯ ಎಂಜಿನಿಯರ್ ಪ್ರಸನ್ನ ಮತ್ತಿತರರು ಇದ್ದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಘು ಎಲ್.ಶೆಟ್ಟಿ ಸ್ವಾಗತಿಸಿದರು. ಸಮಿತಿ ಸದಸ್ಯ ದಿವಾಕರ್ ನಾಯ್ಕ್ ವಂದಿಸಿದರು. ಪ್ರಕಾಶ್ ಬೆಳ್ಳೂರು ಕಾರ್ಯಕ್ರಮ ನಿರ್ವಹಿಸಿದರು.
Be the first to comment on "ಬೆಳ್ಳೂರು ದೇವಸ್ಥಾನದ ರಥಬೀದಿ ಕಾಂಕ್ರೀಟ್ ಕಾಮಗಾರಿಗೆ ಶಿಲಾನ್ಯಾಸ"