ಬಂಟ್ವಾಳ

ಬೆಳ್ಳೂರು ದೇವಸ್ಥಾನದ ರಥಬೀದಿ ಕಾಂಕ್ರೀಟ್ ಕಾಮಗಾರಿಗೆ ಶಿಲಾನ್ಯಾಸ

EDITED AND OWNED BY – HARISH MAMBADY. For Advertisements, News Contact Watsapp No: 9448548127

ಬಂಟ್ವಾಳ: ತೆಂಕಬೆಳ್ಳೂರು ಗ್ರಾಮದ ಬೆಳ್ಳೂರು ಶ್ರೀ ಕಾವೇಶ್ವರ ದೇವಸ್ಥಾನದ ರಥಬೀದಿಗೆ 1.75 ಕೋ.ರೂ.ವೆಚ್ಚದ  ಕಾಂಕ್ರೀಟ್ ಕಾಮಗಾರಿಗೆ ಗುರುವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶಿಲಾನ್ಯಾಸ ನೆರವೇರಿಸಿದರು.

ಗ್ರಾಮದಲ್ಲಿ ಪ್ರಾಕೃತಿಕ ವಿಕೋಪದಿಂದ ಮನೆ ಕುಸಿದು ಹಾನಿಗೊಳಗಾದ 2 ಕುಟುಂಬಗಳಿಗೆ ಶಾಸಕರು ಪರಿಹಾರ ಧನದ ಚೆಕ್ ವಿತರಿಸಿದರು.

ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಬಡಗಬೆಳ್ಳೂರು ಗ್ರಾ.ಪಂ.ಅಧ್ಯಕ್ಷ ಜಿ.ಪ್ರಕಾಶ್ ಆಳ್ವ, ಉಪಾಧ್ಯಕ್ಷೆ ಮಮತಾ, ಸದಸ್ಯರು, ಬಿಜೆಪಿಯ ಪ್ರಮುಖ ನಾಯಕರು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಕಾರ್ಯಪಾಲಕ ಎಂಜಿನಿಯರ್ ಪ್ರಭಾಕರ್ ಟಿ.ಎಂ, ಕಿರಿಯ ಎಂಜಿನಿಯರ್ ಪ್ರಸನ್ನ ಮತ್ತಿತರರು ಇದ್ದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಘು ಎಲ್.ಶೆಟ್ಟಿ ಸ್ವಾಗತಿಸಿದರು. ಸಮಿತಿ ಸದಸ್ಯ ದಿವಾಕರ್ ನಾಯ್ಕ್ ವಂದಿಸಿದರು. ಪ್ರಕಾಶ್ ಬೆಳ್ಳೂರು ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts