ವಿಟ್ಲ

ಕನ್ಯಾನ ಭಾರತ ಸೇವಾಶ್ರಮಕ್ಕೆ ಶಾಸಕ ರಾಜೇಶ್ ನಾಯ್ಕ್ ಭೇಟಿ, ಆಶ್ರಮವಾಸಿಗಳೊಂದಿಗೆ ಸಹಭೋಜನ

EDITED AND OWNED BY – HARISH MAMBADY. For Advertisements, News Contact Watsapp No: 9448548127

ಬಂಟ್ವಾಳ: ಕನ್ಯಾನದ ಭಾರತ ಸೇವಾಶ್ರಮಕ್ಕೆ ಭೇಟಿ ನೀಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು, ಆಶ್ರಮವಾಸಿಗಳೊಂದಿಗೆ ಸಹಭೋಜನ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆಯನ್ನು ಸೇವೆ ಮತ್ತು ಸಮರ್ಪಣಾ ಕಾರ್ಯಕ್ರಮವನ್ನಾಗಿ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಭಾರತ ಸೇವಾಶ್ರಮದಲ್ಲಿ ಭೋಜನ ವ್ಯವಸ್ಥೆಯನ್ನು ಶಾಸಕರ ವತಿಯಿಂದ ಕೈಗೊಳ್ಳಲಾಗಿತ್ತು. ಬಳಿಕ ವಿಟ್ಲ ಮೈತ್ರೇಯಿ ಗುರುಕುಲಕ್ಕೆ ಭೇಟಿ ನೀಡಿದ ಶಾಸಕರು ಪ್ರಮುಖರೊಂದಿಗೆ ಮಾತುಕತೆ ನಡೆಸಿದರು.ಭಾರತ್ ಸೇವಾಶ್ರಮದ ಮುಖ್ಯಸ್ಥ ಈಶ್ವರ ಭಟ್, ಗುರುಕುಲದ ಪ್ರಮುಖರಾದ ಜಗನ್ನಾಥ, ಶ್ರೀಮತಿ ಭಟ್, ರಮೇಶ್, ಹರೀಶ್,  ಬಂಟ್ವಾಳ ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಗಳಾದ ಡೊಂಬಯ್ಯ ಅರಳ, ರವೀಶ್ ಶೆಟ್ಟಿ ಕರ್ಕಳ, ಕಾರ್ಯದರ್ಶಿಗಳಾದ ರಮನಾಥ ರಾಯಿ, ಪುರುಷೋತ್ತಮ ಶೆಟ್ಟಿ ವಾಮದಪದವು , ಸೀತಾರಾಮ ಪೂಜಾರಿ, ಹರ್ಷಿಣಿ ಪುಷ್ಪಾನಂದ, ಉಪಾಧ್ಯಕ್ಷ ರಾದ ರೊನಾಲ್ಡ್ ಡಿ.ಸೋಜ, ಚಂದ್ರವಾತಿ,  ಜಯರಾಮ ನಾಯ್ಕ, ಪ್ರಮುಖರಾದ ಭಾರತಿ ಚೌಟ, ಕಮಲಾಕ್ಷಿ ಕೆ.ಪೂಜಾರಿ,  ಆನಂದ ಶಂಭೂರು, ಅರವಿಂದ ರೈ, ಜಿನರಾಜ್ ಕೋಟ್ಯಾನ್, ಪ್ರಶಾಂತ್ ಅಗರಿ, ರಘರಾಮ ಶೆಟ್ಟಿ ಕನ್ಯಾನ, ಶಿವಪ್ರಸಾದ್ ಶೆಟ್ಟಿ, ರಘರಾಮ್ ಶೆಟ್ಟಿ ಪಟ್ಲ, ವಿನೋದ್ ಪಟ್ಲ, ಉದಯರಮಣ ಭಟ್ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts