




ಬಂಟ್ವಾಳ: ನಡೆದುಕೊಂಡು ಹೋಗುತ್ತಿದ್ದ 16 ವರ್ಷದ ಬಾಲಕಿಯೊಬ್ಬಳನ್ನು ಶುಕ್ರವಾರ ಬಿಳಿ ಕಾರಿನಲ್ಲಿ ಬಂದವರು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಕುರಿತು ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶುಕ್ರವಾರ ಈ ಘಟನೆ ನಡೆದಿದ್ದು, ಆರೋಪಿಗಳ ಪತ್ತೆ ಕಾರ್ಯ ಮತ್ತು ತನಿಖೆ ಪ್ರಗತಿಯಲ್ಲಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ ಅ.ಕ್ರ.116/2021 ಕಲಂ: 366(ಎ), 376 (ಡಿ) 506 ಐಪಿಸಿ ಮತ್ತು ಕಲಂ 04,06 ಪೋಕ್ಸೊ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.
Be the first to comment on "ಬಂಟ್ವಾಳ: ಅಪಹರಣ, ಸಾಮೂಹಿಕ ಅತ್ಯಾಚಾರ ದೂರು – ನಗರ ಠಾಣೆಯಲ್ಲಿ ಪ್ರಕರಣ ದಾಖಲು"