ಬಂಟ್ವಾಳ: ಬಂಟ್ವಾಳ ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರವಾದ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಸನ್ನಿಧಿಯಲ್ಲಿ ದಾಸರ ಪದ ಭಜನಾ ಸ್ಪರ್ಧೆಯು ವಿಶ್ವ ಹಿಂದು ಪರಿಷದ್, ಬಜರಂಗದಳದ ಸಜಿಪ ವಲಯ ವತಿಯಿಂದ ನಡೆಯಿತು. ಒಟ್ಟು 16 ತಂಡಗಳು ಭಾಗವಹಿಸಿದ್ದವು. ಜ್ಞಾನದೀಪ ಮತ್ತು ನಂದಾದೀಪ ವೇದಿಕೆಗಳಲ್ಲಿ ಏಕಕಾಲದಲ್ಲಿ ಸ್ಪರ್ಧೆ ನಡೆಯಿತು.
ಬಜರಂಗದಳದ ದಕ್ಷಿಣ ಪ್ರಾಂತ ಸಂಯೋಜಕ ಸುನಿಲ್ ಕೆ.ಆರ್. ಕಾರ್ಯಕ್ರಮ ಉದ್ಘಾಟಿಸಿದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಭೇಟಿ ನೀಡಿ ಶುಭ ಹಾರೈಸಿದರು. ಈ ಸಂದರ್ಭ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅರವಿಂದ ಭಟ್ ಪದ್ಯಾಣ, ಸಮಿತಿ ಸದಸ್ಯರಾದ ಅರುಣ್, ಯಶವಂತ ದೇರಾಜೆ, ವಿಶ್ವಹಿಂದು ಪರಿಷತ್ತು ಪುತ್ತೂರು ಜಿಲ್ಲಾ ಉಪಾಧ್ಯಕ್ಷ ಕೃಷ್ಣಪ್ಪ, ಪ್ರಮುಖರಾದ ಲೋಹಿತ್ ಪಣೋಲಿಬೈಲು, ಸಚಿನ್ ಮೇಲ್ಕಾರ್, ಪದ್ಮನಾಭ ವಿಟ್ಲ ಮತ್ತಿತರರು ಉಪಸ್ಥಿತರಿದ್ದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಅರುಣ್ ಮಾತನಾಡಿದರು. ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರ್ವಹಿಸಿದರು. ಸತೀಶ್ ಪೂಜಾರಿ ಗುರುಮಂದಿರ ವಂದಿಸಿದರು.
(more…)