



ನವರಾತ್ರಿ ಉತ್ಸವ ಅಂಗವಾಗಿ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಅರ್ಚಕ ರಾಘವೇಂದ್ರ ಮಯ್ಯರಬೈಲು ಹಾಗೂ ಸಹಾಯಕ ಅರ್ಚಕರು ಆಯುಧ ಪೂಜಾ ವಿಧಿವಿಧಾನ ಕಾರ್ಯಕ್ರಮ ನೇರವೇರಿಸಿದರು. ಈ ಸಂದರ್ಭ ಗ್ರೇಡ್ 2 ತಹಶೀಲ್ದಾರ್ ಕವಿತಾ, ಕೇಂದ್ರ ಸ್ಥಾನಿಯ ಶಿರಸ್ತೇದಾರ್ ನರೇಂದ್ರನಾಥ್ ಭಟ್ ಮಿತ್ತೂರು, ಶಿರಸ್ತೇದಾರ್ ಗಳಾದ ದಿವಾಕರ ಮುಗುಳಿಯ, ನವೀನ್ ಬೆಂಜನಪದವು, ಪ್ರಭಾರ ಕಂದಾಯ ನಿರೀಕ್ಷಕರಾದ ಧರ್ಮ ಸಾಮ್ರಾಜ್ಯ, ಕುಮಾರ್ ಟಿ.ಸಿ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿದರು.







Be the first to comment on "ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಆಯುಧ ಪೂಜೆ"