ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ನೇರಳಕಟ್ಟೆ ಎಂಬಲ್ಲಿ ನಡೆದ ಘಟನೆ
ಪುಂಜಾಲಕಟ್ಟೆ: ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಢಿಕ್ಕಿ ಹೊಡೆದು ಪುಂಜಾಲಕಟ್ಟೆ ಪೋಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ವೋರ್ವರು ಮೃತಪಟ್ಟ ಘಟನೆ ಪಿಲಾತಬೆಟ್ಟು ಗ್ರಾಮದ ಮೂರ್ಜೆ ಸಮೀಪದ ನೇರಳಕಟ್ಟೆ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಪುಂಜಾಲಕಟ್ಟೆ ಪೋಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಮೂಲತಃ ವೇಣೂರಿನ ಮರೋಡಿ ನಿವಾಸಿ ಅಬೂಬಕ್ಕರ್ (48) ಮೃತಪಟ್ಟವರು.
ವಾಮದಪದವಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ವಾಪಾಸಾಗುತ್ತಿದ್ದ ವೇಳೆ ನೇರಳಕಟ್ಟೆ ಬಳಿ ಎದುರಿನಿಂದ ಬಂದ ಇನ್ನೊಂದು ದ್ವಿಚಕ್ರ ವಾಹನ ಢಿಕ್ಕಿ ಹೊಡೆದಿದೆ. ಘಟನೆಯಿಂದ ಇನ್ನೊಂದು ಬೈಕಿನ ಸವಾರ ಇರ್ವತ್ತೂರು ನಿವಾಸಿ ದುರ್ಗಾಪ್ರಸಾದ್ ಕೂಡ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ..ಮೃತರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.
IFTAAR ORGANISED BY FORMER MINISTER RAMANATHA RAI AT PANEMANGALORE (more…)