ಪುಂಜಾಲಕಟ್ಟೆ

ದ್ವಿಚಕ್ರ ವಾಹನಗಳ ಡಿಕ್ಕಿ: ಪುಂಜಾಲಕಟ್ಟೆ ಪೊಲೀಸ್ ಸಿಬ್ಬಂದಿ ಮೃತ್ಯುವಶ

ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ನೇರಳಕಟ್ಟೆ ಎಂಬಲ್ಲಿ ನಡೆದ ಘಟನೆ

EDITED AND OWNED BY – HARISH MAMBADY. For Advertisements, News Contact Watsapp No: 9448548127

ಪುಂಜಾಲಕಟ್ಟೆ: ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಢಿಕ್ಕಿ ಹೊಡೆದು ಪುಂಜಾಲಕಟ್ಟೆ ಪೋಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ವೋರ್ವರು ಮೃತಪಟ್ಟ ಘಟನೆ ಪಿಲಾತಬೆಟ್ಟು ಗ್ರಾಮದ ಮೂರ್ಜೆ ಸಮೀಪದ ನೇರಳಕಟ್ಟೆ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಪುಂಜಾಲಕಟ್ಟೆ ಪೋಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಮೂಲತಃ ವೇಣೂರಿನ ಮರೋಡಿ ನಿವಾಸಿ ಅಬೂಬಕ್ಕರ್ (48) ಮೃತಪಟ್ಟವರು.

ವಾಮದಪದವಿನಲ್ಲಿ  ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ವಾಪಾಸಾಗುತ್ತಿದ್ದ ವೇಳೆ ನೇರಳಕಟ್ಟೆ ಬಳಿ ಎದುರಿನಿಂದ ಬಂದ ಇನ್ನೊಂದು ದ್ವಿಚಕ್ರ ವಾಹನ ಢಿಕ್ಕಿ ಹೊಡೆದಿದೆ. ಘಟನೆಯಿಂದ ಇನ್ನೊಂದು ಬೈಕಿನ ಸವಾರ ಇರ್ವತ್ತೂರು ನಿವಾಸಿ ದುರ್ಗಾಪ್ರಸಾದ್ ಕೂಡ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ..ಮೃತರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ. 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ