ಬಂಟ್ವಾಳ

ಅ.24ರಂದು ಬಿ.ಸಿ.ರೋಡ್ ನಿಂದ ಡಿಸಿ ಕಚೇರಿಗೆ ಬೃಹತ್ ಕಾಲ್ನಡಿಗೆ ಜಾಥಾ

EDITED AND OWNED BY – HARISH MAMBADY. For Advertisements, News Contact Watsapp No: 9448548127

ಬಂಟ್ವಾಳ: ಬಿ.ಸಿ.ರೋಡಿನಿಂದ ದ.ಕ.ಜಿಲ್ಲಾಧಿಕಾರಿ ಕಚೇರಿಗೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಬೃಹತ್ ಕಾಲ್ನಡಿಗೆ ಜಾಥಾ ಅಕ್ಟೋಬರ್ 24ರಂದು ನಡೆಯಲಿದೆ.

ಮೂಲಭೂತ ಸೌಕರ್ಯಗಳಲ್ಲಿ ಒಂದಾದ ‘ರಸ್ತೆ ಸಂಪರ್ಕವನ್ನು ಪ. ಜಾತಿ | ಪಂಗಡದವರ  ಮನೆಗಳಿರುವಲ್ಲಿಗೆ ಒದಗಿಸುವಂತೆ ಮತ್ತು ಇತರ ಹಲವಾರು ಬೇಡಿಕೆಗಳನ್ನು ಇಟ್ಟುಕೊಂಡು ಈ ಪ್ರತಿಭಟನೆ ನಡೆಯಲಿದೆ ಎಂದು ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿಯ ಸ್ಥಾಪಕಾಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಸಂಜೆ ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

24ರಂದು ಮಧ್ಯಾಹ್ನ 3 ಗಂಟೆಗೆ ಬಿ, ಸಿ, ರೋಡ್‌ನಿಂದ ಬೃಹತ್ ಕಾಲ್ನಾಡಿಗೆ ಜಾಥ ಹೊರಟು 25ರಂದು ಸರಕಾರವನ್ನು ಒತ್ತಾಯಿಸಿ ಕೂಡಲೇ ಪ. ಜಾತಿ ಪಂಗಡದವರ ಹಾಗೂ ಇತರ ಬಡವರ್ಗದವರ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಲಾಗುತ್ತದೆ ಎಂದವರು ತಿಳಿಸಿದರು.

ರಸ್ತೆ ವಂಚಿತ ದ. ಕ. ಜಿಲ್ಲೆಯ ಪ. ಜಾತಿ / ಪಂಗಡದವರ ಮನೆ ಇರುವಲ್ಲಿಗೆ ರಸ್ತೆ ಸಂಪರ್ಕ ಒದಗಿಸುವಂತೆ ಆಯಾಯ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ಪುರಸಭೆ, ನಗರಸಭೆ ಮತ್ತು ಮಹಾನಗರ ಪಾಲಿಕೆ ಇಲ್ಲಿಗೆ ಬಂದಿರುವ ದೂರು ಅರ್ಜಿಗಳನ್ನು ಪರಿಶೀಲನೆ ಮಾಡಿ ತುರ್ತಾಗಿ ಕ್ರಮವಹಿಸಿ ರಸ್ತೆ ಸಂಪರ್ಕ ಒದಗಿಸುವುದು / ಇತರ ಬೇಡಿಕೆಗಳನ್ನು ಪೂರೈಸಬೇಕಾಗಿ ಅವರು ಒತ್ತಾಯಿಸಿದರು.ರಸ್ತೆ ವಂಚಿತರಾಗಿರುವ 16 ಕಾಲನಿಗಳ ಹಾಗೂ ಕಾಂಕ್ರಿಟೀಕರಣ ಆಗಲು ಬಾಕಿ ಇರುವ ಕಾಲನಿಗಳ ಪಟ್ಟಿ ನೀಡಿದ ಅವರು, ಎಲ್ಲಾ ಬೇಡಿಕೆಗಳಿಗೆ ಸೂಕ್ತವಾದ ನ್ಯಾಯ ಒದಗಿಸದೆ ಇದ್ದಲ್ಲಿ ರಸ್ತೆ ವಂಚಿತರು, ಭೂವಂಚಿತ ನಿವೃತ್ತ ಸೈನಿಕರು ಮುಂಬರುವ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಹಾಗೂ ವಿಧಾನ ಸಭಾ ಚುನಾವಣೆಯನ್ನು ಸಂಪೂರ್ಣವಾಗಿ ಬಹಿಷ್ಕರಿಸಲು ನಿರ್ಧರಿಸಲಾಗುವುದು, ಅಲ್ಲದೆ ರಸ್ತೆ ವಂಚಿತರು ಮುಂದಕ್ಕೆ ಯಾವುದೇ ಕಾರಣಕ್ಕೂ ಆಯಾಯ ಗ್ರಾಮ ಪಂಚಾಯತ್‌ಗಳಿಗೆ ಮನೆ ತೆರಿಗೆ ಕಟ್ಟದಿರಲು ಕೂಡಾ ನಿರ್ಧರಿಸಲಾಗುವುದು. ಜಿಲ್ಲಾಧಿಕಾರಿಗಳು ವಿಶೇಷವಾಗಿ ಕ್ರಮವಹಿಸುವ ಕಡತಗಳಿಗೆ ನ್ಯಾಯ ಒದಗಿಸಿ, ತಮ್ಮ ವ್ಯಾಪ್ತಿಗೆ ಬರದಿರುವ ಬೇಡಿಕೆಗಳನ್ನು ಸರಕಾರಕ್ಕೆ ವರದಿ ಸಲ್ಲಿಸಬೇಕು ಎಂದವರು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ಗೌರವಾಧ್ಯಕ್ಷ ಸೋಮಪ್ಪ ನಾಯ್ಕ ಮಲ್ಯ, ಜಿಲ್ಲಾಧ್ಯಕ್ಷ ಚಂದ್ರಶೇಖರ ಯು.ವಿಟ್ಲ, ಸಂಚಾಲಕ ಗೋಪಾಲ ನೇರಳಕಟ್ಟೆ, ಗೌರವ ಸಲಹೆಗಾರ ಕುಶಾಲಪ್ಪ ಮೂಡಂಬೈಲು, ಪ್ರಮುಖರಾದ ಗಣೇಶ್ ಸೀಗೆಬಲ್ಲೆ, ಲಿಖಿತ್ ಕುಮಾರ್ ಎಸ್, ಸೋಮಪ್ಪ ನಾಯ್ಕ ಮಲ್ಯ ಮತ್ತಿತರರು ಇದ್ದರು.

ಜಿಲ್ಲೆಯಲ್ಲಿ ಶಿಥಿಲಗೊಂಡಿರುವ ಡಾ|| ಬಿ. ಆರ್. ಅಂಬೇಡ್ಕರ್ ಭವನಗಳನ್ನು ಕೂಡಲೆ ದುರಸ್ತಿಗೊಳಿಸಿ, ಸಾರ್ವಜನಿಕರಿಗೆ, ಬಡ ಮತ್ತು ಮಧ್ಯಮ ವರ್ಗದವರಿಗೆ, ಸಭೆ, ಸಮಾರಂಭ ಮತ್ತು ಇನ್ನಿತರ ಕಾರ್ಯಕ್ರಮ ಮಾಡಲು ಅನುವು ಮಾಡಿಕೊಡುವುದು. ಮತ್ತು ಈಗಾಗಲೇ ಕೆಲಸ ಪ್ರಾರಂಭಿಸದ ಅಂಬೇಡ್ಕರ್ ಭವನಕ್ಕೆ ಕೂಡಲೆ ಅನುದಾನ ಒದಗಿಸಿ ಕಾಮಗಾರಿ ಪ್ರಾರಂಭಿಸುವುದು ಹಾಗೂ ನಿರ್ಮಾಣಗೊಂಡ ಭವನಗಳನ್ನು ಲೋಕಾರ್ಪಣೆಗೊಳಿಸುವಂತೆ ತಿಳಿಸಿದರು. ಪುತ್ತೂರು ತಾಲೂಕು ನಗರ ವ್ಯಾಪ್ತಿಯಲ್ಲಿ ಅಂಬೇಡ್ಕರ್ ಭವನಕ್ಕೆ ಜಮೀನು ಮಂಜೂರುಗೊಳಿಸಲು ಕ್ರಮವಹಿಸುವಂತೆ ಅವರು ಒತ್ತಾಯಿಸಿದರು.

ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ನಡೆಯುವ ಲೈಂಗಿನ ದೌರ್ಜನ್ಯವನ್ನು ಹತ್ತಿಕ್ಕಲು ಸೂಕ್ತ ಕ್ರಮವಹಿಸಿ ಅಪ್ರಾಪ್ತರಿಗೆ ರಕ್ಷಣೆ ನೀಡುವುದು. .ದಲಿತರ ಮೇಲೆ ನಡೆಯುವ ದೌರ್ಜನ್ಯಕ್ಕೆ ಮತ್ತು ಅಸ್ಪಶ್ಯತೆಗಳಿಗೆ ಕಡಿವಾಣ ಹಾಕಲು ಕ್ರಮವಹಿಸಿ ಕಠಿಣ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳ ಮುಖಾಂತರ ಸರಕಾರಕ್ಕೆ ವರದಿ ಸಲ್ಲಿಸುವಂತೆಒತ್ತಾಯಿಸಿದರು.

ಜಿಲ್ಲೆಯಲ್ಲಿ ಜಮೀನು ಕೋರಿ ಅರ್ಜಿ ಸಲ್ಲಿಸಿರುವ ನಿವೃತ್ತ ಸೈನಿಕರ ಅರ್ಜಿಗಳನ್ನು ತುರ್ತಾಗಿ ಮತ್ತು ನ್ಯಾಯಾಲಯದ ಆದೇಶಕ್ಕೆ ತಲೆಬಾಗಿ ಮಂಜೂರುಗೊಳಿಸಲು ಕ್ರಮವಹಿಸುವಂತೆ ಮತ್ತು ಬೇಜವಾಬ್ದಾರಿ ತೋರಿರುವ ಅಧಿಕಾರಿಗಳ ಮೇಲೆ ಕ್ರಮ ಜರಗಿಸುವಂತೆ ಆಗ್ರಹಿಸಿದ ಅವರು, ದ. ಕ. ಜಿಲ್ಲೆಯಲ್ಲಿ ಹಲವಾರು ಜಮೀನಿನ ಫ್ಲೋಟಿಂಗ್ ಆಗದೆ ಬಡ ಮತ್ತು ಮಧ್ಯಮ ವರ್ಗದವರು ತನ್ನ ಅಭಿವೃದ್ಧಿಗೆ ಮತ್ತು ತುರ್ತು ಸಾಲಕ್ಕೆ ಬ್ಯಾಂಕಿನಿಂದ ಸಾಲ ಪಡೆಯಲು ಪಡುತ್ತಿರುವ ಕಷ್ಟ ಹೇಳತೀರದು. ಸಾವಿರಾರು ಕಡತಗಳು ವಿಲೇವಾರಿಯಾಗದೆ ಜನಸಾಮಾನ್ಯರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಖುದ್ದಾಗಿ ಕ್ರಮವಹಿಸುವಂತೆ ಒತ್ತಾಯಿಸಿದರು.

 ದ.ಕ. ಜಿಲ್ಲೆಯ ಗ್ರಾಮ ಪಂಚಾಯತ್ / ಪಟ್ಟಣ ಪಂಚಾಯತ್ / ಪುರಸಭೆ, ನಗರ ಸಭೆ ಮತ್ತು ಮಹಾನಗರಪಾಲಿಕೆಯಲ್ಲಿ ಹಲವಾರು ವರ್ಷಗಳಿಂದ ಕೆಲಸ ಮಾಡುವ ಪೌರ ಕಾರ್ಮಿಕರಿಗೆ ಮತ್ತು ಕಛೇರಿಯಲ್ಲಿ ಕೆಲಸ ಮಾಡುವ ಇತರ ಗುತ್ತಿಗೆ ನೌಕರರನ್ನು ನೇರ ವೇತನಕ್ಕೆ ಒಳಪಡಿಸಿ ಅವರನ್ನು ಖಾಯಂ ನೌಕರರನ್ನಾಗಿ ನೇಮಿಸುವುದು ಸಹಿತ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು,

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ