ಬಂಟ್ವಾಳ: ದೇಶದಲ್ಲಿ ಕೋವಿಡ್ ಲಸಿಕೆ 100 ಕೋಟಿ ದಾಟಿದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೇತೃತ್ವದಲ್ಲಿ ಶುಕ್ರವಾರ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು, ದಾದಿಯರು ಸೇರಿದಂತೆ ಸಿಬ್ಬಂದಿಯನ್ನು ಗೌರವಿಸಲಾಯಿತು.
ಬಂಟ್ವಾಳದಲ್ಲಿ ಈಗಾಗಲೇ ೩.೬೦ ಲಕ್ಷ ಮಂದಿ ಲಸಿಕೆ ಪಡೆದಿದ್ದು, ೨.೪೮ ಲಕ್ಷ ಮೊದಲ ಡೋಸ್ ಹಾಗೂ ೧.೨೧ ಲಕ್ಷ ೨ನೇ ಡೋಸ್ ಪಡೆದಿದ್ದಾರೆ. ೬೦ ವರ್ಷ ದಾಟಿದವರು ೪೨ ಸಾವಿರ ಮಂದಿ, ೪೦ ವರ್ಷ ದಾಟಿದವರು ೭೪ ಸಾವಿರ ಮಂದಿ ೧೮ ವರ್ಷ ದಾಟಿದವರು ೧ ಲಕ್ಷಕ್ಕೂ ಅಧಿಕ ಮಂದಿ ಲಸಿಕೆ ಪಡೆದಿದ್ದಾರೆ. ೨೫ ಸಾವಿರದಷ್ಟು ಲಸಿಕೆ ನಮ್ಮಲ್ಲಿ ಸ್ಟಾಕ್ ಇದೆ ಎಂದು ವಿವರಿಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪುಷ್ಪಲತಾ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಬೂಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಪುರಸಭಾ ಸದಸ್ಯ ಹರಿಪ್ರಸಾದ್ ಭಂಡಾರಿಬೆಟ್ಟು, ಬಿಜೆಪಿ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯ ವಿಶ್ವನಾಥ್ ಚಂಡ್ತಿಮಾರ್, ಪ್ರಮುಖರಾದ ರೊನಾಲ್ಡ್ ಡಿಸೋಜ, ರಮನಾಥ ರಾಯಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಗಣೇಶ್ ರೈ ಮಾಣಿ, ಯಶೋಧರ ಕರ್ಬೆಟ್ಟು, ಆನಂದ ಶಂಭೂರು ಮೊದಲಾದವರು ಉಪಸ್ಥಿತರಿದ್ದರು.
Be the first to comment on "ಬಂಟ್ವಾಳದಲ್ಲಿ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗೆ ಗೌರವ ಸಲ್ಲಿಸಿದ ಶಾಸಕ ರಾಜೇಶ್ ನಾಯ್ಕ್"