ಬಂಟ್ವಾಳ: ಅಕ್ಟೋಬರ್ 30 ರಂದು ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧ್ಯಕ್ಷ ತೆಯಲ್ಲಿ ಬಂಟವಾಳದ ಬಂಟರ ಭವನದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಸಾಲ ಸಂಪರ್ಕ ಕಾರ್ಯಕ್ರಮ ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರದ ಬಗ್ಗೆ ಬಂಟ್ವಾಳ ವ್ಯಾಪ್ತಿಯ ವಿವಿಧ ಬ್ಯಾಂಕ್ ಗಳ ಪ್ರಬಂಧಕರ ಸಭೆ ಬಂಟ್ವಾಳ ಶಾಸಕರ ಕಚೇರಿಯಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧ್ಯಕ್ಷತೆಯಲ್ಲಿ ನಡೆಯಿತು.
ಜಿಲ್ಲಾ ಅಗ್ರಣಿ ಬ್ಯಾಂಕ್ ನ ಮುಖ್ಯ ವ್ಯವಸ್ಥಾಪಕರಾದ ಪ್ರವೀಣ್ ಕಾರ್ಯಕ್ರಮದ ಮಾಹಿತಿ ನೀಡಿದರು. ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ದೇವದಾಸ್ ಶೆಟ್ಟಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಶಿಶು ಅಭಿವೃದ್ಧಿ ಮತ್ತು ಯೋಜನಾಧಿಕಾರಿ ಗಾಯತ್ರಿ ಕಂಬಳಿ, ಉಷಾ , ಬಿಎಲ್ಆರ್ ಸಿ ಕನ್ವೀನರ್ ಪ್ರಭಾಕರ್ ಉಪಸ್ಥಿತರಿದ್ದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಅ.30ರಂದು ಜಿಲ್ಲಾ ಮಟ್ಟದ ಸಾಲ ಸಂಪರ್ಕ ಕಾರ್ಯಕ್ರಮ: ಪೂರ್ವಭಾವಿ ಸಭೆ"