ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಅ.25 ರಂದು ಸೋಮವಾರ ಮಿನಿವಿಧಾನ ಸೌಧದಲ್ಲಿ ಸಾರ್ವಜನಿಕರಿಗೆ ಲಭ್ಯವಿದ್ದಾರೆ.
ಅ.25 ರಂದು ಸೋಮವಾರ ಬೆಳಿಗ್ಗೆ 10.30 ರಿಂದ ಸಂಜೆ 3 ಗಂಟೆ ವರೆಗೆ ಮಿನಿ ವಿಧಾನ ಸೌಧದಲ್ಲಿ ಕಾರ್ಯಚರಿಸುತ್ತಿರುವ ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಕಂದಾಯ ಇಲಾಖೆಗೆ ಸಂಬಂಧಪಟ್ಟ ಅಹವಾಲನ್ನು ತಾಲೂಕು ತಹಶೀಲ್ದಾರ್ ಹಾಗೂ ಇಲಾಖಾ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸ್ವೀಕರಿಸಲಿದ್ದಾರೆ ಈ ಪ್ರಯೋಜನವನ್ನು ಸಾರ್ವಜನಿಕರು ಪಡೆಯಬಹುದು ಎಂದು ಶಾಸಕರ ಕಚೇರಿ ಪ್ರಕಟನೆ ತಿಳಿಸಿದೆ.