ಬಂಟ್ವಾಳ: ತುಳುನಾಡಿನ ಅಭಿವೃದ್ಧಿ ಯಲ್ಲಿ ತುಳುನಾಡಿನ ಯುವಜನರಿಗೆ ದೊಡ್ಡ ಪಾಲು ನೀಡುವಂತೆ ಉದ್ಯೋಗ ಸೃಷ್ಟಿಸಿ ,ಸ್ಥಳೀಯರಿಗೆ ಆದ್ಯತೆ ನೀಡುವಂತೆ ಆಗ್ರಹಿಸಿ ಡಿ.ವೈ.ಎಫ್.ಐ ಬಂಟ್ವಾಳ ತಾಲೂಕು ಸಮಾವೇಶ ಇಂದು ಬಿ.ಸಿ.ರೋಡಿನಲ್ಲಿ ನಡೆಯಿತು. ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಡಿ.ವೈ.ಎಫ್.ಐ ರಾಜ್ಯ ಅದ್ಯಕ್ಷರಾದ ಮುನೀರ್ ಕಾಟಿಪಳ್ಳ ಇಂದು ಯುವಜನತೆ ಉದ್ಯೋಗದ ಹಕ್ಕಿಗಾಗಿ ಬೀದಿಗಿಳಿಯಬೇಕಾಗಿದೆ ಆದರೆ ಯುವಜನತೆಯನ್ನು ಧರ್ಮ ಜಾತಿಯ ಹೆಸರಿನಲ್ಲಿ ದಾರಿ ತಪ್ಪಿಸಿ ಅವರು ಬದುಕನ್ನೇ ನಿರ್ನಾಮ ಮಾಡಲು ಕೋಮುವಾದಿ ಶಕ್ತಿಗಳು ಪ್ರಯತ್ನಿಸುತ್ತಿದ್ದು ಯುವಜನತೆ ಎಚ್ಚರಗೊಂಡು ತಮ್ಮ ನಿಜವಾದ ಸಮಸ್ಯೆ ಗಳ ಪರಿಹಾರಕ್ಕಾಗಿ ಸಂಘಟಿತರಾಗಬೇಕೆಂದು ಕರೆ ನೀಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಅಧ್ಯಕ್ಷ ರಾದ ಓಸ್ವಾಲ್ಡ್ ಪ್ರಕಾಶ್ ಪೆರ್ನಾಂಡಿಸ್ ಮಾತನಾಡಿ ನಮ್ಮನ್ನಾಳುವ ಸರಕಾರಗಳು ಕಾರ್ಪೋರೇಟ್ ಕಂಪನಿಗಳ ಪರವಾಗಿರುವ ಕಾರಣ ಸಾಮಾನ್ಯ ಜನತೆಗೆ ಜೀವನ ನಡೆಸಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಎಂದು ಆರೋಪಿಸಿದರು.
ಡಿ.ವೈ.ಎಫ್.ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ ನಿರುದ್ಯೋಗ ದ ಪ್ರಮಾಣ ಅತಿಯಾಗಿ ಯುವ ಜನತೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು ಸರಕಾರದ ಹಲವು ಇಲಾಖೆಗಳಲ್ಲಿ ಹುದ್ದೆಗಳು ಖಾಲಿ ಇದ್ದು ಇದನ್ನು ಭರ್ತಿ ಮಾಡಲು ಸರಕಾರ ಮುಂದಾಗುತ್ತಿಲ್ಲ, ನಿರುದ್ಯೋಗಿ ಯುವಜನತೆಯನ್ನು ರಾಜಕೀಯ ಲಾಭಕ್ಕಾಗಿ ದಾರಿ ತಪ್ಪಿಸಲಾಗುತ್ತಿದೆ ಎಂದು ಆರೋಪಿಸಿದರು.
ಡಿ.ವೈ.ಎಫ್.ಐ ಬಂಟ್ವಾಳ ತಾಲೂಕು ಅದ್ಯಕ್ಷರಾದ ಸುರೇಂದ್ರ ಕೋಟ್ಯಾನ್ ಅಧ್ಯಕ್ಷತೆ ವಹಿಸಿ ಮಾತನಾಡಿ ವಂದಿಸಿದರು. ಡಿ.ವೈ.ಎಫ್.ಐ ಬಂಟ್ವಾಳ ತಾಲೂಕು ಕಾರ್ಯದರ್ಶಿ ತುಳಸೀದಾಸ್ ವಿಟ್ಲ ಆರಂಭದಲ್ಲಿ ಪ್ರಾಸ್ತಾವಿಕ ವಾಗಿ ಮಾತನಾಡಿ ಸ್ವಾಗತಿಸಿದರು.ಸಮಾವೇಶದಲ್ಲಿ ಬಂಟ್ವಾಳ ತಾಲೂಕು ಸಮಿತಿಯನ್ನು ಪುನರ್ ರಚಿಸಲಾಯಿತು.ಸಮಿತಿಯ ಸಲಹೆಗಾರರಾಗಿ ರಾಜ ಚೆಂಡ್ತಿಮಾರ್. ಅಧ್ಯಕ್ಷರಾಗಿ ಸುರೇಂದ್ರ ಕೋಟ್ಯಾನ್ ಹಾಗು ಕಾರ್ಯದರ್ಶಿಯಾಗಿ ತುಳಸೀದಾಸ್.ವಿಟ್ಲ ಪುನರ್ ಆಯ್ಕೆಯಾದರು. ಉಪಾಧ್ಯಕ್ಷರು ಗಳಾಗಿ ಸಲ್ಮಾನ್ .ಪಿ.ಬಿ, ಸಾಧಿಕ್ ಬಂಟ್ವಾಳ. ಜೊತೆ ಕಾರ್ಯದರ್ಶಿಗಳಾಗಿ ಶಹೀದ್ ಶೈನ್, ಶೆರೀಫ್ ಮೈಂದಾಳ, ಕೋಶಧಿಕಾರಿಗಳಾಗಿ ಉಮೇಶ್ ವಾಮದಪದವು. ಹಾಗೂ ಹತ್ತು ಜನರ ಕಾರ್ಯಕಾರಿ ಸಮಿತಿ ರಚಿಸಲಾಯಿತು.
Be the first to comment on "ಯುವಜನತೆ ಉದ್ಯೋಗದ ಹಕ್ಕಿಗಾಗಿ ಬೀದಿಗಿಳಿಯಬೇಕಾಗಿದೆ: ಮುನೀರ್ ಕಾಟಿಪಳ್ಳ"