*ವಿಳಂಬ ಮಾಡದೆ ಅರ್ಜಿ ವಿಲೇವಾರಿ – ಅಧಿಕಾರಿಗಳಿಗೆ ಸೂಚನೆ*
ಬಂಟ್ವಾಳ: ಒಟ್ಟು 92 ಮಂದಿ ಸೋಮವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ ಕಂದಾಯ ಇಲಾಖೆ ಹಾಗೂ ಇತರ ಇಲಾಖೆಗಳ ಕುರಿತ ವಿಚಾರದ ಬಗ್ಗೆ ಅರ್ಜಿ ಸಲ್ಲಿಸಿದ್ದು, ಇವುಗಳನ್ನು ಪರಿಶೀಲಿಸಿದ ಶಾಸಕರು, ಸೂಕ್ತ ಕ್ರಮಕ್ಕೆ ಸೂಚಿಸಿದ್ದಾರೆ. ಇದೇ ವೇಳೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಅರ್ಜಿ ವಿಲೇವಾರಿ ಕುರಿತು ಯಾರೂ ವಿಳಂಬ ಧೋರಣೆ ಅನುಸರಿಸಬಾರದು ಎಂದರು. ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಉಪಸ್ಥಿತಿಯಲ್ಲಿ ಶಾಸಕರು ವಿವಿಧ ಅಹವಾಲುಗಳನ್ನು ಆಲಿಸಿದರು.
ಜಿಪಂ ಮಾಜಿ ಸದಸ್ಯ ತುಂಗಪ್ಪ ಬಂಗೇರ, ಪುರಸಭಾ ಸದಸ್ಯ ಎ.ಗೋವಿಂದ ಪ್ರಭು ಮತ್ತು ಹರಿಪ್ರಸಾದ್ ವಿವಿಧ ಸಮಸ್ಯೆಗಳ ಕುರಿತು ಗಮನಕ್ಕೆ ತಂದರು. ನರಿಕೊಂಬು ಗ್ರಾಮದ ವ್ಯಕ್ತಿಯೊಬ್ಬರ ಮನೆಗೆ ಹಾನಿಯಾಗಿರುವ ಕುರಿತು ೪೫ ಸಾವಿರ ರೂ. ಮಂಜೂರಾಗಿದ್ದು, ಆದರೆ ಹೆಚ್ಚಿನ ಹಾನಿ ಸಂಭವಿಸಿರುವ ಕುರಿತು ಶಾಸಕರ ಗಮನಕ್ಕೆ ಬಂದಾಗ ಅದನ್ನು ತಹಶೀಲ್ದಾರ್ ಅವರಿಗೆ ತಿಳಿಸಿ, ಹಾನಿಗೊಳಗಾದ ಮನೆಯವರಿಗೆ ಸ್ಥಳದಲ್ಲೇ ೯೫ ಸಾವಿರ ರೂ.ಗಳ ಚೆಕ್ ವಿತರಿಸಲಾಯಿತು. ಜತೆಗೆ ತಿರಸ್ಕೃತಗೊಂಡಿದ್ದ ೯೫ಸಿ ಅರ್ಜಿಯನ್ನು ಮರುಪರಿಶೀಲನೆ ನಡೆಸಿ ಕಾಮಾಜೆಯ ಸುಧಾ ಅವರಿಗೆ ಹಕ್ಕುಪತ್ರ ವಿತರಿಸಲಾಯಿತು.
ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಜಿಪಂ ಮಾಜಿ ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ, ರವೀಶ್ ಶೆಟ್ಟಿ ಕರ್ಕಳ, ಅಕ್ರಮ ಸಕ್ರಮ ಸಮಿತಿ ಸದಸ್ಯ ರಮನಾಥ ರಾಯಿ, ಹಿಂದುಳಿದ ವರ್ಗ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಸಾಲಿಯಾನ್ ನರಿಕೊಂಬು, ಪ್ರಮುಖರಾದ ಪವನ್ ಕುಮಾರ್ ಶೆಟ್ಟಿ, ರಂಜಿತ್ ಮೈರ, ವಿಶ್ವನಾಥ್ ಚಂಡ್ತಿಮಾರ್, ಪ್ರಣಾಮ್ ಅಜ್ಜಿಬೆಟ್ಟು, ಮನೋಜ್ ಮತ್ತಿತರರು ಉಪಸ್ಥಿತರಿದ್ದರು.
ತಾಲೂಕು ಕಚೇರಿಯ ಗ್ರೇಡ್ 2 ತಹಶೀಲ್ದಾರ್ ಕವಿತಾ, ಉಪತಹಶೀಲ್ದಾರ್‌ಗಳಾದ ನರೇಂದ್ರನಾಥ್ ಭಟ್, ದಿವಾಕರ ಮುಗುಳಿಯ, ನವೀನ್ ಬೆಂಜನಪದವು, ವಿಜಯವಿಕ್ರಮ, ರಾಜೇಶ್, ಕಂದಾಯ ನಿರೀಕ್ಷಕರಾದ ಧರ್ಮಸಾಮ್ರಾಜ್ಯ, ಕುಮಾರ್, ಮಂಜುನಾಥ್, ಪ್ರಥಮ ದರ್ಜೆ ಸಹಾಯಕ ಸೀತಾರಾಮ್ ಅವರು ಅರ್ಜಿಗಳ ಕುರಿತು ಶಾಸಕರ ಸಮ್ಮುಖದಲ್ಲಿ ಸಾರ್ವಜನಿಕರಿಗೆ ಉತ್ತರ ನೀಡಿದರು.