ಬಂಟ್ವಾಳ: ಕರ್ನಾಟಕ ಸರಕಾರದ ಆದೇಶದಂತೆ ಕನ್ನಡದ ಅಭಿಮಾನವನ್ನು ವೃದ್ಧಿಸುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸುತ್ತೋಲೆಯಂತೆ ಲಕ್ಷಕಂಠಗಳ ಗೀತಗಾಯನ ಬಂಟ್ವಾಳ ತಾಲೂಕಿನ ಕಚೇರಿ, ಶಾಲೆ, ಕಾಲೇಜುಗಳು, ಸರ್ಕಾರಿ ಆಸ್ಪತ್ರೆಗಳಲ್ಲಿ ನಡೆಯಿತು. ನಾಡಗೀತೆ ಜೊತೆಗೆ ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ ಹಾಗೂ ಹುಟ್ಟಿದರೆ ಕನ್ನಡ ನಾಡಲಿ ಹುಟ್ಟಬೇಕು ಗೀತೆಗಳನ್ನು ಹಾಡಲಾಯಿತು.
ಬಂಟ್ವಾಳ ತಾಲೂಕು ಮಟ್ಟದ ಕಾರ್ಯಕ್ರಮವು ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ನಡೆಯಿತು. ಈ ಸಂದರ್ಭ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಬುಡಾ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಮಂಗಳೂರು ಸಹಾಯಕ ಕಮೀಷನರ್ ಮದನ್ ಮೋಹನ್, ಬಂಟ್ವಾಳ ತಹಸೀಲ್ದಾರ್ ತಹಶೀಲ್ದಾರ್ ರಶ್ಮಿ ಎಸ್ ಆರ್, ಗ್ರೇಡ್ 2 ತಹಸೀಲ್ದಾರ್ ಕವಿತಾ, ಕೇಂದ್ರ ಸ್ಥಾನಿಯ ಶಿರಸ್ತೇದಾರ್ ನರೇಂದ್ರ ನಾಥ್ ಭಟ್ ಮಿತ್ತೂರು, ಉಪತಹಸೀಲ್ದಾರ್ ರಾಜೇಶ್ ನಾಯ್ಕ್, ದಿವಾಕರ ಮುಗುಳ್ಯ, ಚುನಾವಣೆ ಶಿರಸ್ತೇದಾರ್ ನವೀನ್ ಬೆಂಜನಪದವು, ಪ್ರಭಾರ ಕಂದಾಯ ನಿರೀಕ್ಷಕರಾದ ಧರ್ಮ ಸಾಮ್ರಾಜ್ಯ , ಮಂಜುನಾಥ್, ಶಿಕ್ಷಣ ಇಲಾಖೆಯಿಂದ ದೈಹಿಕ ಶಿಕ್ಷಣ ಪರಿವೀಕ್ಷಕ ವಿಷ್ಣುನಾರಾಯಣ ಹೆಬ್ಬಾರ್ ಉಪಸ್ಥಿತರಿದ್ದರು. ಬಂಟ್ವಾಳ ಎಸ್.ವಿ.ಎಸ್. ಕನ್ನಡ ಮಾಧ್ಯಮ ಶಾಲೆ ಮತ್ತು ಮೊಡಂಕಾಪು ಕಾರ್ಮೆಲ್ ಶಾಲೆಯ ವಿದ್ಯಾರ್ಥಿಗಳೊಂದಿಗೆ ಅಧಿಕಾರಿಗಳು, ಸಾರ್ವಜನಿಕರು, ಜನಪ್ರತಿನಿಧಿಗಳು ದನಿಗೂಡಿಸಿದರು. ಇದೇ ವೇಳೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ಸುಮಾರು 3 ಸಾವಿರದಷ್ಟು ವಿದ್ಯಾರ್ಥಿಗಳ ಸಹಿತ ತಾಲೂಕಿನ ವಿವಿಧೆಡೆಗಳಲ್ಲಿ ಸರಿಯಾಗಿ ಬೆಳಗ್ಗೆ 11 ಗಂಟೆಗೆ ಕನ್ನಡ ಗೀತಗಾಯನ ಏಕಕಾಲದಲ್ಲಿ ನಡೆಯಿತು.