ಜಿಲ್ಲಾ ಸುದ್ದಿ

ಸಾಲಸೌಲಭ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಉತ್ತಮ ಸಾಧನೆ, ಕೇಂದ್ರ ಯೋಜನೆಗಳಿಂದ ಸ್ವಾವಲಂಬಿಯಾಗುವತ್ತ ದಿಟ್ಟ ಹೆಜ್ಜೆ – ಬಂಟ್ವಾಳದಲ್ಲಿ ಸಚಿವ ಭಗವಂತ ಖೂಬಾ

ಬಂಟ್ವಾಳ: ಬಂಟವಾಳದ ಬಂಟರ ಭವನದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಾಲ ಸಂಪರ್ಕ ಕಾರ್ಯಕ್ರಮ  ಮತ್ತು ಕೇಂದ್ರ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ ಶನಿವಾರ ನಡೆಯಿತು.

ಕೇಂದ್ರ ಸಚಿವ ಭಗವಂತ ಖೂಬಾ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನರೇಂದ್ರ ಮೋದಿ ಪ್ರಧಾನಮಂತ್ರಿ ಆದ ಬಳಿಕ ದೇಶ ಸರ್ವಾಂಗೀಣ ಅಭಿವೃದ್ಧಿಗೊಳ್ಳುತ್ತಿದ್ದು, ದೇಶದ ಜನರು ಆರ್ಥಿಕವಾಗಿ ಸ್ವಾವಲಂಬಿಗಳಾಗುತ್ತಾ ಆತ್ಮನಿರ್ಭರರಾಗುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 195606 ಮಂದಿ ಮುದ್ರಾಯೋಜನೆ ಲಾಭ ಪಡೆದಿದ್ದಾರೆ. ಬೀದಿ ವ್ಯಾಪಾರಿಗಳ ಸಹಿತ ಹಲವರಿಗೆ ಸಾಲ, ಸೌಲಭ್ಯಗಳು ದೊರಕಿವೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಯು. ವಹಿಸಿದ್ದರು.

1 / 6

ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಸಾಲಮೇಳ ಮೂಲಕ ಈ ಜಿಲ್ಲೆಯ ಜನರು ಬ್ಯಾಂಕಿಗೆ ಹೋಗಿ ಸಾಲ ಪಡೆಯಬಹುದು ಎಂದು ನಿರೂಪಿಸಿದವರು ಜನಾರ್ದನ ಪೂಜಾರಿ. ಡಿಜಿಟಲ್ ಇಂಡಿಯಾ, ಜನಧನ್ ಅಕೌಂಟ್ ಮೂಲಕ ನೇರವಾಗಿ ಫಲಾನುಭವಿಗೆ ದೊರಕುವಂತೆ ಪ್ರಧಾನಿ ನರೇಂದ್ರ ಮೋದಿ ಮಾಡಿದರು ಎಂದರು.

ಜಾಹೀರಾತು

ದಕ್ಷಿಣ ಕನ್ಬಡ ಜಿಲ್ಲೆಯಲ್ಲಿ 4 ಲಕ್ಷ ಜನರಲ್ಲಿ ಜನ್ ಧನ್ ಅಕೌಂಟ್ ಆಗಿದೆ ಎಂದು ಮಾಹಿತಿ ನೀಡಿದ ಅವರು, ಬ್ಯಾಂಕಿಂಗ್ ಪರೀಕ್ಷೆಯನ್ನು ಕನ್ನಡದಲ್ಲೂ ಮಾಡಲಾಗುತ್ತಿದೆ. ಹೀಗಾಗಿ ಸ್ಥಳೀಯ ಭಾಷೆ ಬಲ್ಲವರು ಪ್ರತಿಯೊಂದು ಬ್ರಾಂಚ್ ನಲ್ಲಿರುವಂತಾಗಬೇಕು.ಕನ್ನಡ ಮಾತನಾಡುವವರು ಕಡ್ಡಾಯವಾಗಿ ಒಂದೊಂದು ಬ್ರಾಂಚ್ ನಲ್ಲಿರಬೇಕು ಎಂದು ಸೂಚಿಸಿದರು ಬ್ಯಾಂಕಿನಲ್ಲಿರುವ ಮಾಹಿತಿ ಕೊರತೆ ಬ್ರಾಂಚ್ ಗಳಲ್ಲಿದೆ. ಸರಿಯಾದ ನಿರ್ದೇಶನಗಳನ್ನು ಅವರಿಗೆ ನೀಡಬೇಕು ಎಂದರು. ಬೀದಿ ಬದಿ ವ್ಯಾಪಾರಿಗಳಿಗೆ ಸಾಲಸೌಲಭ್ಯ ದೊರಕಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ನಳಿನ್ ಹೇಳಿದರು.

ನವೆಂಬರ್ ತಿಂಗಳಾಂತ್ಯದೊಳಗೆ ಗಡ್ಕರಿ ಜಿಲ್ಲೆಗೆ: ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಶೀಘ್ರ ದ.ಕ.ಜಿಲ್ಲೆಗೆ ಬರಲಿದ್ದಾರೆ. ಬಿ.ಸಿ.ರೋಡ್ ಅಡ್ಡಹೊಳೆ ರಸ್ತೆ ಮರುಚಾಲನೆ, ಕೆಪಿಟಿ ಫ್ಲೈಓವರ್ ನಿರ್ಮಾಣ, ಬಿ.ಸಿ.ರೋಡ್ ಪೊಳಲಿ ಕಟೀಲು ಮೂಲ್ಕಿ ಚತುಷ್ಪಥ ನಿರ್ಮಾಣ ಪ್ರಸ್ತಾಪ, ಪುಂಜಾಲಕಟ್ಟೆ ಚಾರ್ಮಾಡಿವರೆಗೆ ರಸ್ತೆಗೆ ವೇಗ ದೊರಕಲಿದೆ. ಇದೇ ವೇಳೆ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣ, ಕೋಸ್ಟ್ ಗಾರ್ಡ್ ಟ್ರೈನಿಂಗ್ ಸೆಂಟರ್ ಮಾರ್ಚ್ ಒಳಗೆ ಆರಂಭವಾಗುವ ನಿರೀಕ್ಷೆ ಇದೆ ಎಂದು ಸಂಸದ ನಳಿನ್ ಹೇಳಿದರು.

ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಪ್ರಾಸ್ತಾವಿಕವಾಗಿ ಮಾತನಾಡಿ ಜಿಲ್ಲೆಯಲ್ಲಿ 582 ಕೋಟಿ ರೂ ಸಾಲ ವಿತರಣೆ ಆಗಿದೆ. ಬ್ಯಾಂಕುಗಳು ವಿವಿಧ ಕಾರಣಗಳಿಂದ ಸಾಲ ಸೌಲಭ್ಯ ನೀಡಲು ನಿರಾಕರಿಸಿದಾಗ ಯಾರನ್ನು ಸಂಪರ್ಕಿಸಬೇಕು ಎಂಬುದು ಜನರಿಗೆ ಗೊತ್ತಿರುವುದಿಲ್ಲ. ಈ ವೇಳೆ ಜಿಪಂ ಸಿಇಒ ಕಚೇರಿ ಸಂಪರ್ಕಿಸಬಹುದು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರಿಮೀರಿದ ಸಾಲ ಮಂಜೂರಾತಿ ಆಗುತ್ತಿದೆ ಎಂದರು.

ಜಾಹೀರಾತು

ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ದ.ಕ.ಜಿಲ್ಲಾ ಕೇಂಸ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಶುಭ ಹಾರೈಸಿದರು. ಶಾಸಕರಾದ ಸಂಜೀವ ಮಠಂದೂರು, ಡಾ.ವೈ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಹರೀಶ್ ಪೂಂಜ, ಪ್ರತಾಪ್ ಸಿಂಹ ನಾಯಕ್, ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್, ಮಟ್ಟಾರು ರತ್ನಾಕರ ಹೆಗ್ಡೆ, ರವೀಂದ್ರ ಶೆಟ್ಟಿ ಉಳಿದೊಟ್ಟು, ನಿತಿನ್ ಕುಮಾರ್, ಸಂತೋಷ್ ರೈ ಬೋಳಿಯಾರ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಪಂ ಸಿಇಒ ಡಾ.ಕುಮಾರ್, ನಬಾರ್ಡ್ ಡಿಜಿಎಂ ಸಂಗೀತ, ವಿವಿಧ ಬ್ಯಾಂಕುಗಳ ಪ್ರಮುಖರಾದ ಗಾಯತ್ರಿ, ರಾಜೇಶ್ ಗುಪ್ತಾ, ವಿನಾಯಕ್ ಭಟ್ ,ಸಿ.ಜೆ.ಮಹೇಶ್, ಸೂರ್ಯನಾರಾಯಣ, ಅಮಿತ್ ಕುಮಾರ್ , ಶ್ರೀಕಾಂತ್ ಕೆ., ರಾಘವ ನಾಯಕ್, ಸಹಾಯಕ ಕಮಿಷನರ್ ಮದನ್ ಮೋಹನ್, ತಾಪಂ ಇಒ ರಾಜಣ್ಣ, ತಹಸೀಲ್ದಾರ್ ರಶ್ಮಿ ಎಸ್.ಆರ್. ಇದ್ದರು. ಈ ಸಂದರ್ಬ  ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ಸನ್ಮಾನಿಸಲಾಯಿತು. ಫಲಾನುಭವಿಗಳಿಗೆ ಸಾಲ ಸೌಲಭ್ಯ ವಿತರಿಸಲಾಯಿತು. ಐರಿನ್ ರೆಬೆಲ್ಲೊ ಮತ್ತು ಡಾ.ಶಿವಪ್ರಕಾಶ್ ಕಾರ್ಯಕ್ರಮ ನಿರ್ವಹಿಸಿದರು. ಜಿಲ್ಲಾ ಅಗ್ರಣಿ ಬ್ಯಾಂಕ್ ಪ್ರಬಂಧಕ ಪ್ರವೀಣ್ ಸ್ವಾಗತಿಸಿದರು. ಸುಮಾರು 30ರಷ್ಟು ಮಳಿಗೆಗಳು ಕಾರ್ಯಕ್ರಮದಲ್ಲಿದ್ದು, ಮಾಹಿತಿ ನೀಡಿದವು. ಕೃಷಿ, ತಾಪಂ, ಮಹಿಳಾ ಮತ್ತು ಮಕ್ಕಳ ಇಲಾಖೆ ಸಹಿತ ವಿವಿಧ ಇಲಾಖೆ, ಬ್ಯಾಂಕುಗಳಿಗೆ ಸಂಬಂಧಿಸಿ ಪ್ರದರ್ಶನ ಮಳಿಗೆಗಳು, ಮಾಹಿತಿ ಮಳಿಗೆಗಳು ಇದ್ದವು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ