ಬಂಟ್ವಾಳ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯತಿಥಿ ಪ್ರಯುಕ್ತ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ನಾರಾಯಣಗುರು ಭಜನಾ ಮಂಡಳಿ ಪಂಜಿಕಲ್ಲು ಇವರಿಂದ ಭಜನೆ ಕಾರ್ಯಕ್ರಮ ನಡೆಯಿತು.
ಮಾಜಿ ಸಚಿವರಾದ ಬಿ. ರಮಾನಾಥ ರೈ ಇಂದಿರಾಗಾಂಧಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಭಜನಾ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್,ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ,ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರಾದ ಮಲ್ಲಿಕಾ ವಿ ಶೆಟ್ಟಿ ಮಲ್ಲಿಕಾ ಪಕಳ, ಸದಾನಂದ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಬಡಕಬೈಲು, ಬಂಟ್ವಾಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ ಜೋರ ಮೊದಲಾದವರು ಉಪಸ್ಥಿತರಿದ್ದರು.
Be the first to comment on "ಕಾಂಗ್ರೆಸ್ ಪಕ್ಷದಿಂದ ಬಂಟ್ವಾಳದಲ್ಲಿ ಮಾಜಿ ಪ್ರಧಾನಿ ಇಂದಿರಾ ಪುಣ್ಯತಿಥಿ ಆಚರಣೆ"