ಬಂಟ್ವಾಳ: ಕನ್ನಡ ಮಾಧ್ಯಮ ತರಗತಿಯನ್ನಷ್ಟೇ ಮಾಡುವ ಖಾಸಗಿ ವಿದ್ಯಾಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಧ್ವಜಾರೋಹಣ ಮಾಡಿದರು. ಅಸ್ತಿತ್ವ ಪ್ರತಿಷ್ಠಾನ ಪ್ರಧಾನ ಸಂಚಾಲಕರಾದ ಎಸ್.ಎಂ. ಉಡುಪ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ೭೫ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಅಸ್ತಿತ್ವ ಪ್ರತಿಷ್ಠಾನವು ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಹಾಗೂ ಗೀತ ಭಾರತಿ ನಡೆಸಿದ ದೇಶಭಕ್ತಿಗೀತೆ ಗಾಯನ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ವಿತರಿಸಿ ಗೌರವಿಸಿದರು. ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ, ಸಹಸಂಚಾಲಕರಾದ ರಮೇಶ್ ಎನ್ ಮತ್ತಿತರರು ಇದ್ದರು,. ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಲಕ್ಷ್ಮೀಶ ನಿರ್ವಹಿಸಿದರು
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವ
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವ"