



ಬಂಟ್ವಾಳ: ಜಿಲ್ಲೆಯ ಪುರಾಣ ಪ್ರಸಿದ್ದ ಪರ್ವತ ಕ್ಷೇತ್ರಗಳಲ್ಲೊಂದಾದ ಮಹಾತೋಭಾರ ಶ್ರೀ ಕಾರಿಂಜ ಕ್ಷೇತ್ರದ ಶಿವನ ಸಾನಿಧ್ಯಕ್ಕೆ ಯುವಕರ ತಂಡ ಪಾದರಕ್ಷೆ ಧರಿಸಿ ಒಳ ಪ್ರವೇಶಿಸಿದ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಮಂಗಳವಾರ ವೈರಲ್ ಆಗಿದ್ದು, ಈ ಕುರಿತು ಗಮನಕ್ಕೆ ಬಂದ ತಕ್ಷಣ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉನ್ನತ ಪೋಲಿಸ್ ಅಧಿಕಾರಿಗಳನ್ನು ಸಂಪರ್ಕಿಸಿ ಸೂಕ್ತ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿರುತ್ತಾರೆ. ಈ ರೀತಿಯ ಘಟನೆಗಳು ಇತ್ತೀಚೆಗಿನ ದಿನಗಳಲ್ಲಿ ಅಲ್ಲಲ್ಲಿ ನಡೆಯುತ್ತಿದ್ದು ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಬಂಟ್ವಾಳದಲ್ಲಿ ಶಾಂತಿಯನ್ನು ಕದಡಲು ಪ್ರಯತ್ನಿಸಿದ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಪೋಲಿಸ್ ಇಲಾಖೆ ಕೈಗೊಳ್ಳಲು ಸೂಚಿಸಿದ್ದಾರೆ.
Be the first to comment on "ಕಾರಿಂಜ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆ ಆರೋಪ – ವಿಡಿಯೋ ವೈರಲ್: ಘಟನೆಯ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಶಾಸಕ ರಾಜೇಶ್ ನಾಯ್ಕ್ ಸೂಚನೆ"