






ಬಂಟ್ವಾಳ: ಬಂಟ್ವಾಳ ತಾಲೂಕಿನ ಪ್ರಸಿದ್ಧ ಕ್ಷೇತ್ರವಾದ ಕಾರಿಂಜ ಪರ್ವತದಲ್ಲಿ ಶ್ರೀ ಕಾರಿಂಜೇಶ್ವರ ದೇವಸ್ಥಾನವನ್ನು ಅಪವಿತ್ರಗೊಳಿಸಿದ ವಿಚಾರಕ್ಕೆ ಸಂಬಂಧಿಸಿ ನಾಲ್ವರನ್ನು ಪುಂಜಾಲಕಟ್ಟೆ ಎಸ್.ಐ. ಸೌಮ್ಯಾ ನೇತೃತ್ವದಲ್ಲಿ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಕಿಡಿಗೇಡಿಗಳು ಬಂಟ್ವಾಳ ತಾಲೂಕು ಕಾವಳಮುಡೂರು ಗ್ರಾಮದ ಶ್ರೀ ಕಾರಿಂಜೇಶ್ವರ ದೇವಾಸ್ಥಾನಕ್ಕೆ ಚಪ್ಪಲಿ ಧರಿಸಿಕೊಂಡು ಪ್ರವೇಶ ಮಾಡಿ ಧಾರ್ಮಿಕ ನಂಬಿಕೆಗೆ ಧಕ್ಕೆ ಉಂಟು ಮಾಡಿ ಪೂಜಾ ಸ್ಥಳವನ್ನು ಅಪವಿತ್ರಗೊಳಿಸಿರುವ ವಿಡಿಯೋವನ್ನು ಹರಿಯಬಿಟ್ಟಿದ್ದಾರೆ. ಅಕ್ಟೋಬರ್ 10ರಂದು ಈ ವಿಡಿಯೋವನ್ನು ಅಪ್ಲೋಡ್ ಮಾಡಲಾಗಿದೆ. ಆರೋಪಿಗಳು ದೇವಾಸ್ಥಾನ ಪೂಜಾ ಸ್ಥಳವೆಂದು ಗೊತ್ತಿದ್ದರೂ ದೇವಾಸ್ಥಾನಕ್ಕೆ ಚಪ್ಪಲಿ ಧರಿಸಿಕೊಂಡು ಪ್ರವೇಶ ಮಾಡಿ ಅಪವಿತ್ರಗೊಳಿಸಿದ್ದು, ಇವರ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Be the first to comment on "ಕಾರಿಂಜ ದೇವಸ್ಥಾನ ಅಪವಿತ್ರಗೊಳಿಸಿ ವಿಡಿಯೋ ಅಪ್ಲೋಡ್ ಮಾಡಿದ ಪ್ರಕರಣ: ನಾಲ್ವರು ಪುಂಜಾಲಕಟ್ಟೆ ಪೊಲೀಸ್ ವಶಕ್ಕೆ"