ಪುಂಜಾಲಕಟ್ಟೆ

ಕಾರಿಂಜ ದೇವಸ್ಥಾನ ಅಪವಿತ್ರಗೊಳಿಸಿ ವಿಡಿಯೋ ಅಪ್ಲೋಡ್ ಮಾಡಿದ ಪ್ರಕರಣ: ನಾಲ್ವರು ಪುಂಜಾಲಕಟ್ಟೆ ಪೊಲೀಸ್ ವಶಕ್ಕೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಪ್ರಸಿದ್ಧ ಕ್ಷೇತ್ರವಾದ ಕಾರಿಂಜ ಪರ್ವತದಲ್ಲಿ ಶ್ರೀ ಕಾರಿಂಜೇಶ್ವರ ದೇವಸ್ಥಾನವನ್ನು ಅಪವಿತ್ರಗೊಳಿಸಿದ ವಿಚಾರಕ್ಕೆ ಸಂಬಂಧಿಸಿ ನಾಲ್ವರನ್ನು ಪುಂಜಾಲಕಟ್ಟೆ ಎಸ್.ಐ. ಸೌಮ್ಯಾ ನೇತೃತ್ವದಲ್ಲಿ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಕಿಡಿಗೇಡಿಗಳು ಬಂಟ್ವಾಳ ತಾಲೂಕು ಕಾವಳಮುಡೂರು ಗ್ರಾಮದ ಶ್ರೀ ಕಾರಿಂಜೇಶ್ವರ ದೇವಾಸ್ಥಾನಕ್ಕೆ ಚಪ್ಪಲಿ ಧರಿಸಿಕೊಂಡು ಪ್ರವೇಶ ಮಾಡಿ ಧಾರ್ಮಿಕ ನಂಬಿಕೆಗೆ ಧಕ್ಕೆ ಉಂಟು ಮಾಡಿ ಪೂಜಾ ಸ್ಥಳವನ್ನು ಅಪವಿತ್ರಗೊಳಿಸಿರುವ ವಿಡಿಯೋವನ್ನು ಹರಿಯಬಿಟ್ಟಿದ್ದಾರೆ. ಅಕ್ಟೋಬರ್ 10ರಂದು ಈ ವಿಡಿಯೋವನ್ನು ಅಪ್ಲೋಡ್ ಮಾಡಲಾಗಿದೆ. ಆರೋಪಿಗಳು ದೇವಾಸ್ಥಾನ ಪೂಜಾ ಸ್ಥಳವೆಂದು ಗೊತ್ತಿದ್ದರೂ ದೇವಾಸ್ಥಾನಕ್ಕೆ ಚಪ್ಪಲಿ ಧರಿಸಿಕೊಂಡು ಪ್ರವೇಶ ಮಾಡಿ ಅಪವಿತ್ರಗೊಳಿಸಿದ್ದು, ಇವರ  ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ