ವೀರಕಂಭ: ನಿವೃತ್ತ ಯೋಧರಿಗೆ ಮಾಜಿ ಸಚಿವ ರೈ ಅವರಿಂದ ಸನ್ಮಾನ

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನಿಂದ ಕಾರ್ಯಕ್ರಮ

ಬಂಟ್ವಾಳ: ವೀರಕಂಭ ಗ್ರಾಮದಲ್ಲಿರುವ ನಿವೃತ್ತ ಯೋಧ ದಾಸಪ್ಪ ಅವರನ್ನು ಸ್ವಗೃಹದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಸನ್ಮಾನಿಸಲಾಯಿತು.

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾರ್ಯಕ್ರಮ ನಡೆಯಿತು. ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ನೆಕ್ಕಿಲಾರ್‌ನ  ಸಂಜೀವ ಪೂಜಾರಿ ಹಾಗೂ ಸುಂದರಿ ದಂಪತಿಗಳ ಪುತ್ರರಾಗಿ ಜನಿಸಿದ ದಾಸಪ್ಪ ಅವರು, ದೇಶ ಸೇವೆಯ ತುಡಿತದೊಂದಿಗೆ ಭಾರತೀಯ ಸೇನೆಗೆ ಸೇರ್ಪಡೆಗೊಂಡು ದೇಶದ ವಿವಿದೆಡೆ ಕರ್ತವ್ಯ ನಿರ್ವಹಿಸಿ , ಯುದ್ಧಗಳಲ್ಲೂ ಪಾಲ್ಗೊಂಡು 32 ವರ್ಷಗಳ ಸೇವೆ ಸಲ್ಲಿಸಿ ಇದೀಗ ಸೇವಾ ನಿವೃತ್ತಿ ಪಡೆದು ತವರೂರಿಗೆ ಆಗಮಿಸಿದ್ದಾರೆ. ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿಪಂ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಪ್ರಮುಖರಾದ ಸುದರ್ಶನ ಜೈನ್, ಪದ್ಮನಾಭ ರೈ, ಜಯಂತಿ ಪೂಜಾರಿ, ಕೃಷ್ಣಪ್ಪ ಪೂಜಾರಿ, ಕೇಶವ ಪೂಜಾರಿ, ಸಿದ್ಧಿಕ್ ಸರವು ವೀರಕಂಬ  ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ವೀರಕಂಭ: ನಿವೃತ್ತ ಯೋಧರಿಗೆ ಮಾಜಿ ಸಚಿವ ರೈ ಅವರಿಂದ ಸನ್ಮಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*