ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನಿಂದ ಕಾರ್ಯಕ್ರಮ
ಬಂಟ್ವಾಳ: ವೀರಕಂಭ ಗ್ರಾಮದಲ್ಲಿರುವ ನಿವೃತ್ತ ಯೋಧ ದಾಸಪ್ಪ ಅವರನ್ನು ಸ್ವಗೃಹದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಸನ್ಮಾನಿಸಲಾಯಿತು.
ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾರ್ಯಕ್ರಮ ನಡೆಯಿತು. ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ನೆಕ್ಕಿಲಾರ್‌ನ ಸಂಜೀವ ಪೂಜಾರಿ ಹಾಗೂ ಸುಂದರಿ ದಂಪತಿಗಳ ಪುತ್ರರಾಗಿ ಜನಿಸಿದ ದಾಸಪ್ಪ ಅವರು, ದೇಶ ಸೇವೆಯ ತುಡಿತದೊಂದಿಗೆ ಭಾರತೀಯ ಸೇನೆಗೆ ಸೇರ್ಪಡೆಗೊಂಡು ದೇಶದ ವಿವಿದೆಡೆ ಕರ್ತವ್ಯ ನಿರ್ವಹಿಸಿ , ಯುದ್ಧಗಳಲ್ಲೂ ಪಾಲ್ಗೊಂಡು 32 ವರ್ಷಗಳ ಸೇವೆ ಸಲ್ಲಿಸಿ ಇದೀಗ ಸೇವಾ ನಿವೃತ್ತಿ ಪಡೆದು ತವರೂರಿಗೆ ಆಗಮಿಸಿದ್ದಾರೆ. ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಜಿಪಂ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಪ್ರಮುಖರಾದ ಸುದರ್ಶನ ಜೈನ್, ಪದ್ಮನಾಭ ರೈ, ಜಯಂತಿ ಪೂಜಾರಿ, ಕೃಷ್ಣಪ್ಪ ಪೂಜಾರಿ, ಕೇಶವ ಪೂಜಾರಿ, ಸಿದ್ಧಿಕ್ ಸರವು ವೀರಕಂಬ ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ದರು.
IFTAAR ORGANISED BY FORMER MINISTER RAMANATHA RAI AT PANEMANGALORE (more…)