ಬಂಟ್ವಾಳ

ಹಿರಿಯ ರಾಜಕೀಯ ನೇತಾರ ಸದಾನಂದ ಮಲ್ಲಿ ಇನ್ನಿಲ್ಲ

ಬಂಟ್ವಾಳ: ಹಿರಿಯ ರಾಜಕೀಯ, ಸಾಮಾಜಿಕ ನೇತಾರ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಹಾಗೂ ಜಿಪಂ ಮಾಜಿ ಸದಸ್ಯ ಸದಾನಂದ ಮಲ್ಲಿ (82) ಅವರು ಬಂಟ್ವಾಳದ ಪಲ್ಲಮಜಲುವಿನಲ್ಲಿರುವ ಸ್ವಗೃಹದಲ್ಲಿ ಬುಧವಾರ ರಾತ್ರಿ ನಿಧನ ಹೊಂದಿದರು. ಪತ್ನಿ ಸ್ವರ್ಣಲತಾ ಮಲ್ಲಿ, ಪುತ್ರ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ರಾಜ್ಯದ ಕಾರ್ಯಾಧ್ಯಕ್ಷ ರಾಕೇಶ್ ಮಲ್ಲಿ, ಪುತ್ರಿ ರಶ್ಮಿ ಮತ್ತು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಸುದೀರ್ಘ ಅವಧಿಗೆ ಆಗಿನ ಬಂಟ್ವಾಳ ಪಟ್ಟಣ ಪಂಚಾಯಿತಿ ಈಗಿನ ಪುರಸಭೆಯ ಸದಸ್ಯರಾಗಿದ್ದ ಅವರು ಬಂಟ್ವಾಳ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ, ಪುರಸಭೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಬಿ.ಸಿ.ರೋಡಿನ ಶ್ರೀ ಚಂಡಿಕಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಸಹಿತ ಹಲವು ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದ ಅವರು ಜಿಲ್ಲಾ ಪಂಚಾಯಿತಿಗೆ ಪುದು ಕ್ಷೇತ್ರದಿಂದ ಸ್ಪರ್ಧಿಸಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts