ಸೋಶಿಯಲ್ ಇಖ್ವಾ ಫೆಡರೇಶನ್ ಆಶ್ರಯದಲ್ಲಿ ಸ್ನೇಹ ಸಮ್ಮಿಲನ

ಬಂಟ್ವಾಳ: ಪ್ರವಾದಿ ಮಹಮ್ಮದ್ (ಸ. ಅ) ರವರ ಜನ್ಮ ದಿನಾಚರಣೆಯ ಪ್ರಯುಕ್ತ “ಸ್ನೇಹಸಮ್ಮಿಲನ” ಕಾರ್ಯಕ್ರಮ ಮಾಣಿಯ ರಾಜ್ ಕಮಲ್ ಆಡಿಟೋರಿಯಂನಲ್ಲಿ ನಡೆಯಿತು

ಕಾರ್ಯಕ್ರಮವನ್ನು ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಸಂಯುಕ್ತ ಖಾಝಿಯವರಾದ ಹಾಜಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಉದ್ಘಾಟಿಸಿದರು. ಮಾಣಿ ಸೋಶಿಯಲ್ ಇಖ್ವಾ ಫೆಡರೇಷನ್ ಅಧ್ಯಕ್ಷ ಅಬ್ದುಲ್ ರಹ್ಮಾನ್ ಸುಲ್ತಾನ್ ಅಧ್ಯಕ್ಷತೆ ವಹಿಸಿದ್ದರು. ದಾರಿಮಿ ಉಲಮಾ ಒಕ್ಕೂಟದ ರಾಜ್ಯಾಧ್ಯಕ್ಷ ಎಸ್.ಬಿ.ದಾರಿಮಿ ಮುಖ್ಯ ಭಾಷಣ ಮಾಡಿದರು. ಆಲ್ ಇಂಡಿಯಾ ಇಮಾಂ ಕೌನ್ಸಿಲ್ ಪ್ರಧಾನ ಕಾರ್ಯದರ್ಶಿ ಜಾಫರ್ ಸ್ವಾದಿಕ್ ಫೈಝಿ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಂ.ಎಸ್. ಮಹಮ್ಮದ್, ಹಿರಿಯ ಪತ್ರಕರ್ತ ಬದ್ರುದ್ದೀನ್ ಮಾಣಿ, ಮುಸ್ಲಿಂ ಸೆಂಟ್ರಲ್ ಕಮಿಟಿ ಸದಸ್ಯ ಹನೀಫ್ ಖಾನ್ ಕೊಡಾಜೆ,  ಮಾಣಿ  ಸೋಶಿಯಲ್ ಇಖ್ವಾ ಫೆಡರೇಷನ್ ಉಪಾಧ್ಯಕ್ಷ ರಿಯಾಝ್ ಕಲ್ಲಾಜೆ ಮಾತನಾಡಿದರು.   

ಮುಖ್ಯ ಅತಿಥಿಗಳಾಗಿ ಸೋಶಿಯಲ್ ಇಖ್ವಾ ಫೆಡರೇಷನ್ ನ ಗೌರವ ಸಲಹೆಗಾರರಾದ ಮೊಹಮ್ಮದ್ ರಫೀಕ್ ಹಾಜಿ ಸುಲ್ತಾನ್, ಉಮರ್ ಹಾಜಿ ರಾಜ್ ಕಮಲ್,  ಕೊಡಾಜೆ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಇಬ್ರಾಹಿಂ ರಾಜ್ ಕಮಲ್,  ಖತೀಬ್ ಅಬ್ದುಲ್ ಅಝೀಝ್ ದಾರಿಮಿ ಪೊನ್ಮಳ, ಸೂರಿಕುಮೇರು ಜುಮಾ ಮಸೀದಿ ಅಧ್ಯಕ್ಷ ಮೂಸಾ ಕರೀಂ, ಖತೀಬ್ ಇಸ್ಮಾಯಿಲ್ ಆಸಿಫ್ ಹನೀಫಿ,    ಕಡೇಶ್ವಾಲ್ಯ ಜುಮಾ ಮಸೀದಿ ಅಧ್ಯಕ್ಷ ಕೆ.ಎಸ್. ಮೊಹಮ್ಮದ್, ನೀರಪಾದೆ ಜುಮಾ ಮಸೀದಿ ಅಧ್ಯಕ್ಷರಾದ ರಶೀದ್ ನೀರಪಾದೆ, ಏನಾಜೆ ಬಿಲಾಲ್ ಜುಮಾ ಮಸೀದಿ ಖತೀಬ್ ಅಬ್ದುಲ್ ಮಜೀದ್ ದಾರಿಮಿ, ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಲತೀಫ್ ನೇರಳಕಟ್ಟೆ ಮೊದಲಾದವರು ಭಾಗವಹಿಸಿದ್ದರು. ಸಂಸ್ಥೆಯ ವತಿಯಿಂದ ನಡೆಸಲ್ಪಡುವ ಆಂಬುಲೆನ್ಸ್ ಚಾಲಕರಾಗಿ ಸೇವೆ ಸಲ್ಲಿಸುತ್ತಿರುವ ಶರೀಫ್ ಪರ್ಲೊಟ್ಟು, ನವಾಝ್ ಕೊಡಾಜೆ, ಶಂಶೀರ್ ಬುಡೋಳಿ, ಅಶ್ರಫ್ ಮನೋಹರ್, ಆಸಿಫ್ ಮಾಣಿ ಹಾಗೂ ಅಝೀಂ ನೆಲ್ಲಿ ಅವರನ್ನು ಅಭಿನಂದಿಸಲಾಯಿತು. ಸಂಘಟನೆಯ ಕಾರ್ಯವ್ಯಾಪ್ತಿಯ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಯಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸ್ಮರಣಿಕೆ ಹಾಗೂ ನಗದು ನೀಡಿ ಪುರಸ್ಕರಿಸಲಾಯಿತು.

ಜಾಹೀರಾತು

ಸೋಶಿಯಲ್ ಇಖ್ವಾ ಫೆಡರೇಷನ್ ನ ಮಾಧ್ಯಮ ಕಾರ್ಯದರ್ಶಿ ಪಿ.ಜೆ.ಅಬ್ದುಲ್ ಅಝೀಝ್ ಗಡಿಯಾರ ಸ್ವಾಗತಿಸಿ,  ಕಾರ್ಯದರ್ಶಿ ಬಾಶಿತ್ ಬುಡೋಳಿ  ಪ್ರಾಸ್ತಾವನೆಗೈದರು. ಶೈಕ್ಷಣಿಕ ಕಾರ್ಯದರ್ಶಿ ಇಂಜಿನಿಯರ್ ಲತೀಫ್ ಕೊಡಾಜೆ ವಂದಿಸಿ,  ಸೋಶಿಯಲ್ ಇಖ್ವಾ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಜೈನುಲ್ ಅಕ್ಬರ್ ಕಡೇಶ್ವಾಲ್ಯ ಕಾರ್ಯಕ್ರಮ ನಿರೂಪಿಸಿದರು. ಆಂಬುಲೆನ್ಸ್ ಉಸ್ತುವಾರಿಗಳಾದ ಶಬ್ಬೀರ್ ಖಾನ್ ಕಡೇಶ್ವಾಲ್ಯ, ಮಜೀದ್ ಸೂರಿಕುಮೇರು ಹಾಗೂ ಹನೀಫ್ ಸೂರಿಕುಮೇರು ಸಹಕರಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಸೋಶಿಯಲ್ ಇಖ್ವಾ ಫೆಡರೇಶನ್ ಆಶ್ರಯದಲ್ಲಿ ಸ್ನೇಹ ಸಮ್ಮಿಲನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*