ಬಂಟ್ವಾಳ

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ರಸಪ್ರಶ್ನೆ, ಪ್ರಬಂಧ, ಭಿತ್ತಿಚಿತ್ರ ಸ್ಪರ್ಧೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲೆ ಮತ್ತು ಎಸ್.ಎಲ್.ಎನ್.ಪಿ.ಪ್ರೌಢಶಾಲೆಗಳಲ್ಲಿ ಮತದಾರರ ಜಾಗೃತಿಗಾಗಿ ಮತದಾರರ ದಿನಾಚರಣೆಯ ಪ್ರಯುಕ್ತ ಬಂಟ್ವಾಳ ತಾಲೂಕು ಮಟ್ಟದ ಪ್ರಬಂಧ, ಭಿತ್ತಿಚಿತ್ರ, ರಸಪ್ರಶ್ನೆ ಸ್ಪರ್ಧೆಗಳನ್ನು ನಡೆಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ.ಪಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಜಿಲ್ಲಾ ನೋಡೆಲ್ ಮತ್ತು ಉಪನಿರ್ದೇಶಕರ ಕಚೇರಿಯ ವಿಷಯ ಪರಿವೀಕ್ಷಕರಾದ ಶೋಭಾ ಉಪಸ್ಥಿತರಿದ್ದು ಶುಭ ಹಾರೈಸಿದರು. ತಾಲೂಕ ನೋಡೆಲ್ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಶಿಕ್ಷಣ ಸಂಯೋಜಕರಾದ ಸುಜಾತ ಸ್ವಾಗತಿಸಿ, ಕಾರ್ಯಕ್ರಮ ಸಂಯೋಜಿಸಿದರು. ಉಭಯ ಶಾಲೆಗಳ ಮುಖ್ಯ ಶಿಕ್ಷಕರಾದಭೋಜ ಮತ್ತು ರಮಾ ಭಂಡಾರಿ ಉಪಸ್ಥಿತರಿದ್ದರು.ಬೆಂಜನಪದವು ಪ್ರೌಢಶಾಲೆಯ ಶಿಕ್ಷಕರಾದ ದೇವದಾಸ್ ಇವರು ವಂದಿಸಿದರು. ಹೇಮಾ, ಹಿಲ್ಡಾ, ಸುಬ್ರಹ್ಮಣ್ಯ ರಾವ್,ಮರಳಿ ಕೃಷ್ಣರಾವ್, ಚೆನ್ನಕೇಶವ ಮತ್ತು ಯಶವಂತ ತೀರ್ಪುಗಾರರಾಗಿ ಸಹಕರಿಸಿದರು. ಹರಿಪ್ರಸಾದ್ ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು. ಬಂಟ್ವಾಳ ತಾಲೂಕಿನ ವಿವಿಧ ಶಾಲೆಗಳ  300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts