ಭೂಸ್ವಾಧೀನ ವಿಚಾರ: ಕಲ್ಲಡ್ಕ ಪರಿಸರಕ್ಕೆ ಸಹಾಯಕ ಕಮೀಷನರ್ ನೇತೃತ್ವದ ತಂಡ ಭೇಟಿ

ಬಂಟ್ವಾಳ: ಬಿ.ಸಿ.ರೋಡು-ಅಡ್ಡಹೊಳೆ ಹೆದ್ದಾರಿ ಚತುಷ್ಪಥ ಕಾಮಗಾರಿ ಹಿನ್ನೆಲೆಯಲ್ಲಿ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪರಿಹಾರ ಪಡೆದು ಜಾಗವನ್ನು ಹೆದ್ದಾರಿಗೆ ಬಿಟ್ಟುಕೊಡದೇ ಇರುವ ವಿಚಾರದ ಕುರಿತು ಮಂಗಳವಾರ ಮಂಗಳೂರು ಸಹಾಯಕ ಕಮೀಷನರ್ ನೇತೃತ್ವದ ತಂಡ ಕಲ್ಲಡ್ಕ ಭಾಗದಲ್ಲಿ ಸಂಬಂಧಪಟ್ಟ ಜಾಗದ ಮಾಲೀಕರನ್ನು ಭೇಟಿಯಾಗಿ ಮನವೊಲಿಸುವ ಕಾರ್ಯ ನಡೆಸಿದರು.

ಜಾಗ ಬಿಟ್ಟು ಕೊಡದೇ ಇದ್ದರೆ ಸರಕಾರದ ನಿಯಮ ಪ್ರಕಾರ ತೆರವು ಮಾಡಬೇಕಾದ ಕಾರ್ಯ ಮಾಡಲಾಗುವುದು ಎಂದು ಸಹಾಯಕ ಕಮೀಷನರ್ ಮದನ್‌ಮೋಹನ್ ಸಿ. ಎಚ್ಚರಿಸಿದರು. ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್, ವಿಶೇಷ ಭೂಸ್ವಾಧೀನಾಧಿಕಾರಿ ಮಂಜುನಾಥ್, ಪಾಣೆಮಂಗಳೂರು ಕಂದಾಯ ನಿರೀಕ್ಷಕ ಧರ್ಮಸಾಮ್ರಾಜ್ಯ, ನರಿಕೊಂಬು ಗ್ರಾಮಕರಣಿಕ ಆತಿಕ್‌ ಕುಮಾರ್, ಗೋಳ್ತಮಜಲು ಗ್ರಾ.ಪಂ.ಅಧ್ಯಕ್ಷ ಅಭಿಷೇಕ್ ಶೆಟ್ಟಿ, ಅಭಿವೃದ್ಧಿ ಅಧಿಕಾರಿ ವಿಜಯಶಂಕರ ಆಳ್ವ, ಗ್ರಾಮಸಹಾಯಕ ಮೋಹನ್, ಹೆದ್ದಾರಿ ಇಲಾಖೆ ಹಾಗೂ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಭೂಸ್ವಾಧೀನ ವಿಚಾರ: ಕಲ್ಲಡ್ಕ ಪರಿಸರಕ್ಕೆ ಸಹಾಯಕ ಕಮೀಷನರ್ ನೇತೃತ್ವದ ತಂಡ ಭೇಟಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*