ಬಂಟ್ವಾಳ: ಮುಂಬರುವ ವಿಧಾನಪರಿಷತ್ತು ಚುನಾವಣೆ ಹಿನ್ನೆಲೆಯಲ್ಲಿ ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೇತೃತ್ವದಲ್ಲಿ ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ವಿಚಾರಗಳ ಕುರಿತು ಚರ್ಚಿಸಲಾಯಿತು. ಪಕ್ಷ ಸಂಘಟನೆ ಮತ್ತು ಚುನಾವಣೆಯ ತಯಾರಿಯ ಕುರಿತು ವಿಚಾರ ವಿಮರ್ಶೆ ನಡೆಸಲಾಯಿತು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷರೂ ಕ್ಷೇತ್ರದ ಪ್ರಭಾರಿಗಳಾದ ಕೊರಗಪ್ಪ ನಾಯ್ಕ್, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ ಕರ್ಕಳ, ಡೋಂಬಯ್ಯ ಅರಳ, ಬುಡಾ ಅಧ್ಯಕ್ಷ ದೇವದಾಸ್ ಶೆಟ್ಟಿ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.