ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಹಕಾರಿ ಘಟಕಕ್ಕೆ ಸುದರ್ಶನ ಜೈನ್ ಅವರು ಆಯ್ಕೆಗೊಂಡಿದ್ದಾರೆ. ಮಾಜಿ ಸಚಿವ ಬಿ.ರಮಾನಾಥ ರೈ ಶಿಫಾರಸಿನೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶದ ಮೇರೆಗೆ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಅವರು ಈ ನೇಮಕ ಮಾಡಿದ್ದಾರೆ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಕೌಶಲ್ ಪ್ರಸಾದ್ ಶೆಟ್ಟಿ ಸಹಸಂಚಾಲಕರಾಗಿರುತ್ತಾರೆ. ಮುಂದಿನ ದಿನಗಳಲ್ಲಿ ಸಹಕಾರಿ ಘಟಕ ಜಿಲ್ಲಾ ಸಮಿತಿ, ಬ್ಲಾಕ್ ಘಟಕಗಳಲ್ಲಿ ಸಮಿತಿಗಳನ್ನು ರಚಿಸಿ ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ಮಹತ್ವದ ಪಾತ್ರ ವಹಿಸಲಿವೆ ಎಂದು ಸುದರ್ಶನ ಜೈನ್ ತಿಳಿಸಿದ್ದಾರೆ.