





ಬಂಟ್ವಾಳ: ಭಾನುವಾರ ಮಧ್ಯಾಹ್ನದ ಬಳಿಕ ನಡೆದ ದಾರುಣ ಘಟನೆಯಲ್ಲಿ ಬಂಟ್ವಾಳ ತಾಲೂಕಿನ ಮಂಗಳೂರು ಬಿ.ಸಿ.ರೋಡ್ ಮಧ್ಯೆ ಬ್ರಹ್ಮರಕೂಟ್ಲು ಸಮೀಪ ರಾಮಲ್ ಕಟ್ಟೆ ಎಂಬಲ್ಲಿ ಕ್ಯಾಟರಿಂಗ್ ವಾಹನವೊಂದು ಮರಕ್ಕೆ ಡಿಕ್ಕಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಉಪ್ಪಿನಂಗಡಿ ನಿವಾಸಿಗಳಾದ ಚೇತನ್ (25) ಮತ್ತು ಆಶೀತ್ (21) ಮೃತಪಟ್ಟರೆ, ಸಿಂಚನ್ ಮತ್ತು ಸುದೀಪ್ (ಇಬ್ಬರೂ ಬಂಟ್ವಾಳದವರು) ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾ.ಹೆ.75ರ ತುಂಬೆ ರಾಮಲಕಟ್ಟೆಯ ಬಳಿ ಕ್ಯಾಟರಿಂಗ್ ವೊಂದರ ಆಹಾರ ಸಾಗಾಟ ಮಾಡುತ್ತಿದ್ದ ಪಿಕ್ ಅಪ್ ಮರಕ್ಕೆ ಢಿಕ್ಕಿ ಹೊಡೆದಿದೆ. ಕ್ಯಾಟರಿಂಗ್ ಕೆಲಸವನ್ನು ಮುಗಿಸಿ ಮರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ತಕ್ಷಣ ಗಾಯಾಳುಗಳನ್ನು ಸಮೀಪದ ತುಂಬೆ ಆಸ್ಪತ್ರೆಗೆ ದಾಖಲಾಯಿಸಲಾಯಿತಾದರೂ ಪ್ರಯೋಜನವಾಗಲಿಲ್ಲ.ಬಂಟ್ವಾಳ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.
Be the first to comment on "ರಾಮಲ್ ಕಟ್ಟೆ ಬಳಿ ಕ್ಯಾಟರಿಂಗ್ ವಾಹನ ಮರಕ್ಕೆ ಡಿಕ್ಕಿ: ಇಬ್ಬರು ಯುವಕರು ಮೃತ್ಯುವಶ"