ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ
ಬಂಟ್ವಾಳ: ಉದ್ಯೋಗ ನಡೆಸುವ ಜಾಗದಲ್ಲಿ ಮಹಿಳಾ ದೌರ್ಜನ್ಯವಾದರೆ, ಯಾವುದೇ ಹೆದರಿಕೆ ಬೇಡ, ನಿರ್ಭೀತಿಯಿಂದ ಕಾನೂನು ನೆರವು ಪಡೆಯಬಹುದು ಎಂದು ಬಂಟ್ವಾಳ ಪ್ರಧಾನ ಸಿವಿಲ್ ನ್ಯಾಯಾಧೀಶೆ ರಮ್ಯಾ ಎಚ್.ಆರ್. ಹೇಳಿದರು.
ಬಂಟ್ವಾಳ ಮಿನಿ ವಿಧಾನಸೌಧ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ಬಂಟ್ವಾಳ ವಕೀಲರ ಸಂಘ, ಕಂದಾಯ ಹಾಗೂ ಇತರೆ ಇಲಾಖೆಗಳ ಸಹಯೋಗದೊಂದಿಗೆ ಅಜಾದಿ ಕಾ ಅಮೃತ ಮಹೋತ್ಸವದ ಕಾನೂನು ಸಪ್ತಾಹದ ಪ್ರಯುಕ್ತ ನಡೆದ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಬಂಟ್ವಾಳ ತಾಲೂಕು ಕಚೇರಿಯ ಗ್ರೇಡ್-೨ ತಹಶೀಲ್ದಾರ್ ಕವಿತಾ ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ನರೇಂದ್ರನಾಥ ಭಂಡಾರಿ ಅವರು ವೃತ್ತಿ ಕ್ಷೇತ್ರದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಗಳು ವಿಷಯದ ಕುರಿತು ಮಾತನಾಡಿದರು. ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ಬಿ.ಗಣೇಶಾನಂದ ಸೋಮಯಾಜಿ, ಉಪಾಧ್ಯಕ್ಷ ಮೋಹನ ಪ್ರಭು, ಸಹಾಯಕ ಸರಕಾರಿ ಅಭಿಯೋಜಕಿ ಹರಿಣಿಕುಮಾರಿ ಡಿ., ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧೀಕಾರಿ ಗಾಯತ್ರಿ ಕಂಬಳಿ, ಬಂಟ್ವಾಳ ಪೊಲೀಸ್ ಇಲಾಖೆಯ ಎಎಸ್‌ಐ ಗಿರೀಶ್, ಕೇಂದ್ರ ಸ್ಥಾನೀಯ ಶಿರಸ್ತೇದಾರ್ ನರೇಂದ್ರನಾಥ್ ಭಟ್ ಮಿತ್ತೂರು, ಕಂದಾಯ ನಿರೀಕ್ಷಕರಾದ ಧರ್ಮಸಾಮ್ರಾಜ್ಯ, ಕುಮಾರ್ ಟಿ.ಸಿ., ಸಿಬಂದಿ, ವಕೀಲರ ಸಂಘದ ಸದಸ್ಯರು ಉಪಸ್ಥಿತರಿದ್ದರು. ಉಪತಹಶೀಲ್ದಾರ್ ನವೀನ್ ಬೆಂಜನಪದವು ಸ್ವಾಗತಿಸಿ, ವಂದಿಸಿದರು.