ಕಲ್ಲಡ್ಕ

ಮಜಿ ಶಾಲೆಯಲ್ಲಿ ಸೃಜನಶೀಲ ಚಟುವಟಿಕೆಯೊಂದಿಗೆ ಮಕ್ಕಳ ದಿನಾಚರಣೆ

ಬಂಟ್ವಾಳ: ಮಕ್ಕಳ ದಿನಾಚರಣೆಯನ್ನುವೀರಕಂಭದ ಮಜಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಭಿನ್ನವಾಗಿ ನಡೆಸಲಾಯಿತು. ಪೇಪರ್ ಬ್ಯಾಗ್ ತಯಾರಿ, ಕ್ಲೇ ಮಾಡೆಲ್, ಡ್ರಾಯಿಂಗ್ ಸಹಿತ ವಿವಿಧ ರಚನಾತ್ಮಕ ಸೃಜನಶೀಲ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಹಳ್ಳಿ ಶಾಲಾ ಮಕ್ಕಳು ಮೆಚ್ಚುಗೆ ಗಳಿಸಿದರು.

ಕಾರ್ಯಕ್ರಮವನ್ನು ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ಶನ್ಫತ್ ಶರೀಫ್ ಉದ್ಘಾಟಿಸಿದರು. ಕಾರ್ಯದರ್ಶಿ ಚಿತ್ತರಂಜನ್ ಶೆಟ್ಟಿ ಬೊಂಡಾಲ ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿ ಶಾಲಾ ಶತಮಾನೋತ್ಸವ ಸಮಿತಿಯ ಉಪಾಧ್ಯಕ್ಷ  ಈಶ್ವರ ಭಟ್ ನಗ್ರಿಮೂಲೆ ಭಾಗವಹಿಸಿದ್ದರು. ಶಾಲಾ ಮಕ್ಕಳಿಗೆ ಕ್ಲೇ ಮೋಡೆಲ್ , ಡ್ರಾಯಿಂಗ್ , ಪಿಕ್ ಆಂಡ್ ಆಕ್ಟ್ , ಕ್ವಿಝ್ , ವಿವಿವಿಧ ರೀತಿಯ ಲಕ್ಕಿ ಗೇಮ್ಸ್ ಗಳನ್ನು ನಡೆಸಲಾಯಿತು. ಶಾಲಾ ಶಿಕ್ಷಕರಿಗೆ ಮತ್ತು ಪೋಷಕರಿಗೆ ಅದೃಷ್ಟ ದ ಆಟ ನಡೆಸಲಾಗಿದ್ದು, ಬಹುಮಾನ ವಿತರಿಸಲಾಯಿತು. ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಅಧ್ಯಕ್ಷ ತೆಯಲ್ಲಿ ಸಮಾರೋಪ ಸಮಾರಂಭ ನಡೆಯಿತು. ಆನ್ಸ್ ನ ಅಧ್ಯಕ್ಷೆ ವಿದ್ಯಾ ಉಮೇಶ್, ಕಾರ್ಯದರ್ಶಿ ರಶ್ಮಿ ವಿ ಶೆಟ್ಟಿ , ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ವಿಜಯಾ ಶೇಖರ್, ಸದಸ್ಯ ಗೋಪಾಲಕೃಷ್ಣ ಭಟ್, ರೋಟರಿ ಕ್ಲಬ್ ಬಂಟ್ವಾಳ ಟೌನ್  ಪ್ರಮುಖರಾದ ಜಯರಾಜ್ ಎಸ್ ಬಂಗೇರ ,ಸುಕುಮಾರ್  ಬಂಟ್ವಾಳ, ಕಿಶೋರ್ ಕುಮಾರ್, ಗಾಯತ್ರಿ ಲೋಕೇಶ್, ನಾರಾಯಣ ಸಿ ಪೆರ್ನೆ ನೌಶೀದ್ ಆಲ್ ಖಜಾನಾ  ಭಾಗವಹಿಸಿದ್ದರು. ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು. ಶಿಕ್ಷಕಿಯರಾದ ಮುರ್ಷೀದಾ ಬಾನು ಹಾಗೂ ಜಯಲಕ್ಷ್ಮಿ ವಂದಿಸಿದರು. ಶಿಕ್ಷಕಿ ಸಂಗೀತ ಶರ್ಮ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts