ಬಂಟ್ವಾಳ

ಜನಪರ ಸಾಹಿತ್ಯ ಪರಿಷತ್: ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಡಾ. ಎಂ.ಪಿ.ಶ್ರೀನಾಥ್ ಭರವಸೆ

ಬಂಟ್ವಾಳ: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ್ನು ಕ್ರಿಯಾಶೀಲವಾಗಿ ಪುನರ್ ರೂಪಿಸಿ, ಚಟುವಟಿಕೆಯನ್ನು ಗುಣಾತ್ಮಕವಾಗಿ ವಿಸ್ತರಿಸಲು ಪ್ರಯತ್ನಿಸಲಾಗುವುದು, ಜನಪರ ಸಾಹಿತ್ಯ ಪರಿಷತ್ ನಮ್ಮ ಧ್ಯೇಯ ಎಂದು ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಡಾ.ಎಂ.ಪಿ.ಶ್ರೀನಾಥ್ ಉಜಿರೆ ಭರವಸೆ ನೀಡಿದ್ದಾರೆ.

ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ತಮ್ಮು ಮುಂದಿನ ಯೋಚನೆ, ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಜಿಲ್ಲೆ ಸೇರಿದಂತೆ ತಾಲೂಕು ಮಟ್ಟದಲ್ಲಿ ಸುಸಜ್ಜಿತ ಕನ್ನಡ ಭವನದ ನಿರ್ಮಾಣ,ಶಾಲಾ- ಕಾಲೇಜುಗಳಲ್ಲಿ ಸಾಹಿತ್ಯ ಚಟುವಟಿಕೆಯನ್ನು ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿ ಪ್ರತಿಭೆಗಳಿಗೆ ಸೂಕ್ತವಾದ ವೇದಿಕೆ ನಿರ್ಮಿಸಿಕೊಡುವುದು,ಜಿಲ್ಲೆಯಲ್ಲಿರುವ ಪ್ರತಿಭಾವಂತ ಸಾಹಿತಿಗಳನ್ನು ಗುರುತಿಸಿ ಅವರ ಸಾಹಿತ್ಯಕ್ಕೆ ವೇದಿಕೆ ಕಲ್ಪಿಸಿಕೊಡುವುದು,ಸೃಜನಶೀಲ ಕಾರ್ಯಕ್ರಮಗಳಿಗೆ ಆದ್ಯತೆ,ಹಿರಿಯ ಸಾಹಿತಿಗಳ ಮಾರ್ಗದರ್ಶನದಿಂದ ಯುವ ಸಾಹಿತಿ,ಕವಿಗಳಿಗೆ ಅವಕಾಶ ಕಲ್ಪಿಸಿ ಪ್ರೇರಣೆ ನೀಡಲು ಉದ್ಧೇಶಿಸಿರುವುದಾಗಿ ತಿಳಿಸಿದರು.

ತಂತ್ರಜ್ಞಾನವನ್ನು ಬಳಸಿಕೊಂಡುಜಿಲ್ಲೆಯ ಸಾಹಿತಿಗಳ ಮತ್ತು ಸಾಹಿತ್ಯ ಕೃತಿಗಳ ದಾಖಲೀಕರಣಗೊಳಿಸುವುದು,ಕನ್ನಡದ ಉತ್ತಮ ಕೃತಿಗಳನ್ನು ಬೇರೆ ಭಾಷೆಗಳಿಗೆ ಅನುವಾದ ಮಾಡಲು ಪ್ರೋತ್ಸಾಹಿಸುವುದು,ತಂತ್ರಜ್ಞಾನದ ಮೂಲಕ ಓದುಗರಿಗೆ ಕನ್ನಡ ಪುಸ್ತಕಗಳು ಸಿಗುವ ನಿಟ್ಟಿನಲ್ಲಿ‌ ಪ್ರಯತ್ನಿಸಲಾಗುವುದು ಎಂದು ಅವರು ನ.21 ರಂದು ಸಾಹಿತ್ಯ ಪರಿಷತ್ತಿನ ಚುನಾವಣೆಯು ಆಯಾಯ ತಾಲೂಕು ಕೇಂದ್ರದಲ್ಲಿ ಬೆ.8 ರಿಂದ ಸಂಜೆ 4 ರವರೆಗೆ ನಡೆಯಲಿದ್ದು ,ತನ್ನನ್ನು‌ ಬಹುಮತದಿಂದ ಗೆಲ್ಲಿಸುವಂತೆ ಮನವಿ ಮಾಡಿದರು.ಸುದ್ದಿಗೋಷ್ಠಿಯಲ್ಲಿ ಹಿರಿಯ ಕಲಾವಿದರಾದ ಸರಪಾಡಿ ಅಶೋಕ್ ಶೆಟ್ಟಿ, ಮಂಜು ವಿಟ್ಲ, ಸುಭಾಶ್ಚಂದ್ರ ಜೈನ್, ಕಸಾಪ ತಾಲೂಕು ಘಟಕದ ಮಾಜಿ ಅಧ್ಯಕ್ಷ ಜಯಾನಂದ ಪೆರಾಜೆ ಇದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts