ಬಂಟ್ವಾಳ

ರೈಲಿನ ಯಾವ ಬೋಗಿ ಎಲ್ಲಿ ನಿಲ್ತದೆ? ಲಯನ್ಸ್ ವತಿಯಿಂದ ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ ಹಾಕಲಾಗಿದೆ ಸೂಚನಾಫಲಕ

ಬಂಟ್ವಾಳ: ನೈರುತ್ಯ ರೈಲ್ವೇ ಮಂಗಳೂರು ಭಾಗದ ಬಂಟ್ವಾಳ ರೈಲು ನಿಲ್ದಾಣದಲ್ಲಿ ಹಾದು ಹೋಗುವ ರೈಲುಗಳ ಕೋಚ್ ಸಂಖ್ಯೆ ಪ್ರದರ್ಶಿಸುವ ರೈಲ್ ಕೋಚ್ ನಾಮ ಪಲಕವನ್ನು ಲಯನ್ಸ್ ಸೇವಾ ಟ್ರಸ್ಟ್ (ರಿ.) ಬಂಟ್ವಾಳ ಮತ್ತು ಲಯನ್ಸ್ ಕ್ಲಬ್ ಬಂಟ್ವಾಳ ತನ್ನ 50ನೇ ವರ್ಷದ ಸೇವಾ ವರ್ಷದ ಕೊಡುಗೆಯಾಗಿ ಬಂಟ್ವಾಳ ರೈಲು ನಿಲ್ದಾಣದ ಫ್ಲಾಟ್ ಪಾರಂನಲ್ಲಿ ಅನಾವರಣಗೊಳಿಸಲಾಯಿತು.

ಲಯನ್ಸ್ ಕ್ಲಬ್ ಮತ್ತು ಟ್ರಸ್ಟ್ ಅಧ್ಯಕ್ಷರಾದ ಡಾ. ಬಿ. ವಸಂತ ಬಾಳಿಗಾ ಫಲಕವನ್ನು ಲೋಕಾರ್ಪಣೆ ಮಾಡಿದರು. ಬಂಟ್ವಾಳ ರೈಲ್ವೆ ಸ್ಟೇಷನ್ ಮಾಸ್ಟರ್‌ರವರಿಗೆ ಹಸ್ತಾಂತರಿಸಿ, ಬಂಟ್ವಾಳ ರೈಲು ನಿಲ್ದಾಣದಲ್ಲಿ ನಿಲ್ದಾಣಾಧಿಕಾರಿಗೆ ಬಳಕೆಯ ವಿಧಾನವನ್ನು ವಿವರಿಸಲಾಯಿತು. ಜಿಲ್ಲಾ ಸಂಪುಟದ ಪ್ರಧಾನ ಸಂಯೋಜಕ ದಾಮೋದರ ಬಿ.ಎಂ., ಜಿಲ್ಲಾ ಸಹ ಕಾರ್ಯದರ್ಶಿ ಲಕ್ಷ್ಮಣ ಕುಲಾಲ್, ವಲಯಾಧ್ಯಕ್ಷ ಎಂ. ಕೃಷ್ಣಶ್ಯಾಮ್, ಕುಕ್ಕೇಶ್ರೀ ಸುಬ್ರಹ್ಮಣ್ಯ- ಮಂಗಳೂರು ರೈಲು ಬಳಕೆದಾರರ ಹಿತರಕ್ಷಣಾ ವೇದಿಕೆ ಪುತ್ತೂರು ಇದರ ಸಂಚಾಲಕ ಸುದರ್ಶನ್ ಪುತ್ತೂರು ರೈಲು ನಿಲ್ದಾಣದ ನಿವೃತ್ತ ಸ್ಟೇಷನ್‌ ಮಾಸ್ಟರ್ ಲಯನ್ಸ್ ಸದಸ್ಯ ರವಿಶಂಕರ್ ಸೋಮಯಾಜಿ, ಲಯನ್ಸ್ ಕ್ಲಬ್ ಕಾರ್ಯದರ್ಶಿ ಧೀರಜ್ ಹೆಬ್ರಿ, ಸದಸ್ಯರಾಧ ಸತ್ಯನಾರಾಯಣ ರಾವ್, ಮಧುಕರ ಶೆಟ್ಟಿ, ಮಾಧವ ಮಾರ್ಲ, ದೇವಿಕಾ ದಾಮೋದರ್, ತಫೋಧನ್ ಶೆಟ್ಟಿ, ರಾಮಯ್ಯ ಶೆಟ್ಟಿ, ಜಗದೀಶ್ ಬಿ.ಎಸ್. ಬೋರ್ಡನ್ನು ವಿನ್ಯಾಸಗೊಳಿಸಿದ ಜೇಮ್ಸ್ ಗಲ್ಭಾವೋ, ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ