ಬಂಟ್ವಾಳ: ತಾಲೂಕಿನ ಪಾಣೆಮಂಗಳೂರು ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ಅನಿಲ ಟ್ಯಾಂಕರ್ ಒಂದು ಚಾಲಕನ ನಿಯಂತ್ರಣ ಮೀರಿ ಹೆದ್ದಾರಿ ಬದಿಗೆ ವಾಲಿಕೊಂಡು ನಿಂತಿತು. ಬಳಿಕ ಪೊಲೀಸರು ಕ್ರೇನ್ ಸಹಾಯದಿಂದ ಅದನ್ನು ತೆರವುಗೊಳಿಸಿದರು.
ಮಂಗಳೂರಿನ ಅನಿಲ ತುಂಬಿಸಿಕೊಂಡು ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಟ್ಯಾಂಕರ್ ಬೆಳಗಿನ ಜಾವ ಪಾಣೆಮಂಗಳೂರು ಹೆದ್ದಾರಿಯ ಮಾರುತಿ ಶೋರೂಮ್ ಬಳಿ ಎದುರಿನಿಂದ ಬರುತ್ತಿದ್ದ ವಾಹನಕ್ಕೆ ಸೈಡ್ ಕೊಡುವ ಪ್ರಯತ್ನದಲ್ಲಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ವಾಲಿ ನಿಂತಿತು. ಕೆಲಕಾಲ ವಾಹನದಟ್ಟಣೆ ಉಂಟಾಗಿ ಟ್ರಾಫಿಕ್ ಜಾಮ್ ಆಯಿತು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…