ಜಿಲ್ಲಾ ಸುದ್ದಿ

ಮಂಚಿ ಸಮೀಪ ಉರುಳಿಗೆ ಸಿಲುಕಿದ ಚಿರತೆ: ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಹೆಗಡೆಗುಳಿ ಎಂಬಲ್ಲಿ ಉರುಳಿಗೆ ಸಿಲುಕಿದ್ದ ಚಿರತೆಯೊಂದನ್ನು ಬಂಟ್ವಾಳದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳೀಯರ ಸಹಕಾರದೊಂದಿಗೆ ರಕ್ಷಿಸಲು ಯಶಸ್ವಿಯಾಗಿದೆ. ಶುಕ್ರವಾರ ತಡರಾತ್ರಿವರೆಗೂ ಈ ಕಾರ್ಯಾಚರಣೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್, ಉಪಅರಣ್ಯ ಸಂರಕ್ಷಣಾಧಿಕಾರಿ ದಿನೇಶ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನಟಾಲ್ಕರ್ ಮಾರ್ಗದರ್ಶನದಲ್ಲಿ ನಡೆದಿದ್ದು. ಅವರ ಮಾರ್ಗದರ್ಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಬಂಟ್ವಾಳ ವಲಯಾರಣ್ಯಾಧಿಕಾರಿ ರಾಜೇಶ್ ಬಳಿಗಾರ್ ತಿಳಿಸಿದ್ದಾರೆ.

ಸುತ್ತ ಮನೆಗಳೇ ಇರುವ ಜಾಗದಲ್ಲಿ ಚಿರತೆಯೊಂದು ಉರುಳಿಗೆ ಸಿಲುಕಿಕೊಂಡಿತ್ತು. ಸುಮಾರು ರಾತ್ರಿ 8 ಗಂಟೆ ವೇಳೆ ಚಿರತೆ ಇರುವ ಮಾಹಿತಿ ದೊರಕಿತು. ಸ್ಥಳೀಯರ ಮಾಹಿತಿ ಆಧಾರದಲ್ಲಿ ದೊರೆತ ವಿಚಾರದಂತೆ ಕೂಡಲೇ ಕಾರ್ಯಾಚರಣೆಗಿಳಿದ ಅರಣ್ಯ ಇಲಾಖೆ ಸುಮಾರು 4 ತಾಸುಗಳ ಪರಿಶ್ರಮದ ಬಳಿಕ ಚಿರತೆಯ ಪ್ರಜ್ಞೆ ತಪ್ಪಿಸಿ ಕೊಂಡೊಯ್ಯಲು ಸಫಲವಾಯಿತು.

ಸುಮಾರು 60 ಕೆ.ಜಿ. ತೂಕದಷ್ಟಿರುವ ಈ ಚಿರತೆಗೆ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಮಂಗಳೂರಿನಿಂದ ಡಾ. ಯಶಸ್ವಿ ಮತ್ತು ವೈದ್ಯರ ತಂಡ ಮತ್ತು ಬರುವ ಇಂಜೆಕ್ಷನ್ ಕೊಟ್ಟ ಬಳಿಕ ಸುಮಾರು 15 ನಿಮಿಷದ ಬಳಿಕ ಅಮಲಿನಲ್ಲಿ ಚಿರತೆ ಮಲಗಿತು. ಬೋನಿನಲ್ಲಿ ಹಾಕಿ ಪಿಕಪ್ ನಲ್ಲಿ ತಂದು ವಲಯ ಕಚೇರಿಗೆ ತರಲಾಯಿತು ಎಂದವರು ತಿಳಿಸಿದ್ದಾರೆ. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್, ಉಪಅರಣ್ಯ ಸಂರಕ್ಷಣಾಧಿಕಾರಿ ದಿನೇಶ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನಟಾಲ್ಕರ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಲಯಾರಣ್ಯಾಧಿಕಾರಿ ರಾಜೇಶ್ ಬಳಿಗಾರ್, ಉಪವಲಯಾರಣ್ಯಾಧಿಕಾರಿ ಪ್ರೀತಮ್ ಎಸ್, ಯಶೋಧರ್, ಅರಣ್ಯರಕ್ಷಕ ಜಿತೇಶ್, ಶೋಭಿತ್, ದಯಾನಂದ್, ಅರಣ್ಯವೀಕ್ಷಕ ಪ್ರವೀಣ್, ಎನ್.ಇ.ಸಿ.ಎಫ್. ತಂಡದಿಂದ ಸ್ನೇಕ್ ಕಿರಣ್, ನಿತ್ಯಪ್ರಕಾಶ್ ಬಂಟ್ವಾಳ್, ಮಂಗಳೂರಿನ ಡಾ. ಯಶಸ್ವಿ ಮತ್ತು ತಂಡದವರು, ಅರಣ್ಯ ಇಲಾಖೆ ಸಿಬ್ಬಂದಿ ವರ್ಗ ಜೊತೆ ಸ್ಥಳೀಯರಾದ ಮನೋರಾಜ್ ರೈ ಕಟ್ಟೆ, ಪ್ರವೀಣ್ ಶೆಟ್ಟಿ ಉದ್ದೊಟ್ಟು ಮತ್ತಿತರರು ಉಪಸ್ಥಿತರಿದ್ದು, ಸೂಕ್ತ ಕ್ರಮಗಳನ್ನು ಕೈಗೊಂಡರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಬಿ.ವಿ.ಕಾರಂತ ಹುಟ್ಟಿದ ತಾಲೂಕಲ್ಲಿ ಸುಸಜ್ಜಿತ ರಂಗಮಂದಿರವೇ ಇಲ್ಲ

| ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲು ಪರದಾಟ | ತಾಲೂಕು ಕೇಂದ್ರದಲ್ಲಿ ಜಾಗವೇ ದೊರಕಿಲ್ಲ (more…)

7 hours ago