ಬಂಟ್ವಾಳ: ಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ ಮಹಿಳೆ ಶನಿವಾರ ಬೆಳಗ್ಗೆ ನದಿಗೆ ಹಾರಿದ್ದಾರೆ. ಸುಮಾರು 9.45ರಿಂದ 10 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆಯಿಂದ ಮಹಿಳೆಯೊಬ್ಬರು ನದಿಗೆ ಹಾರಿದ್ದನ್ನು ವಾಹನ ಸವಾರರೊಬ್ಬರು ನೋಡಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳೀಯ ಮುಳುಗುಗಾರರು ದೋಣಿಯ ಮೂಲಕ ನೇತ್ರಾವತಿ ಸೇತುವೆಯ ಬಳಿಗೆ ಬಂದರೂ ಅದಾಗಲೇ ಮಹಿಳೆ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಸ್ಥಳೀಯರು ನೀಡಿದ್ದಾರೆ. ಘಟನೆ ನಡೆದ ಬಳಿಕ ಕೆಲವು ಸಮಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆಯಾಗಿತ್ತು. ಸ್ಥಳಕ್ಕೆ ಆಗಮಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಟ್ರಾಫಿಕ್ ಸುಲಭ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.
| ಪುರಸಭಾ ವ್ಯಾಪ್ತಿಯ ಜನರಲ್ಲಿ ಸಹಕಾರಕ್ಕೆ ಪ್ರಾಜೆಕ್ಟ್ ಡೈರೆಕ್ಟರ್ ಸಂತೋಷ್ ಕುಮಾರ್ ಮನವಿ | ನೀರು ಶುದ್ಧೀಕರಣ ಘಟಕಕ್ಕೆ ಭೇಟಿ,…