ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆಯನ್ನು ಶನಿವಾರ ಸಹಕಾರಿ ನೌಕರರ ಸಭಾಭವನ ಬಿ.ಸಿ.ರೋಡಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪಿ.ಜ್ಞಾನೇಶ್ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಹೊಸ ಶಿಕ್ಷಣ ಪದ್ಧತಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ಸಕರಾತ್ಮಕ ಬದಲಾವಣೆಯಾಗಲಿದೆ. ಎಂದರು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಪಿ.ಕೆ.ಕೃಷ್ಣ ಕಾರ್ಯಾಗಾರವನ್ನು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಬಂಟ್ವಾಳ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು ವಹಿಸಿದ್ದರು.
ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಜಿಲ್ಲಾಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಪಿಂಚಣಿದಾರರ ಸಂಘದ ತಾಲೂಕು ಅಧ್ಯಕ್ಷ ಪಿ. ಲೋಕನಾಥ ಶೆಟ್ಟಿ ಶುಭ ಹಾರೈಸಿದರು. ವಿಶೇಷ ಆಹ್ವಾನಿತರಾಗಿ ಆಗಮಿಸಿದ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಅವರನ್ನು ಅಭಿನಂದಿಸಲಾಯಿತು. ಜಿಲ್ಲಾ ಹಾಗೂ ತಾಲೂಕು ಪ್ರಶಸ್ತಿ ವಿಜೇತರು ಹಾಗೂ ನಿವೃತ್ತ ಸರಕಾರಿ ನೌಕರರ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಅಭಿನಂದಿಸಿ ಪುರಸ್ಕರಿಸಲಾಯಿತು. ಕಾರ್ಯಕ್ರಮ ಸಂಯೋಜಕ ಕಾರ್ಯದರ್ಶಿ ಸಂತೋಷ್ ಕುಮಾರ್ ಸ್ವಾಗತಿಸಿ ವಂದಿಸಿದರು. ತಾಲೂಕು ಮತ್ತು ಇತರ ತಾಲೂಕುಗಳ ಪ್ರಮುಖರಾದ ಗಾಯತ್ರಿ ಆರ್. ಕಂಬಳಿ, ಶಮಂತ್ ಕುಮಾರ್, ಮಂಜುನಾಥ್ ಕೆ.ಎಚ್, ನವೀನ್ ಪಿ.ಎಸ್, ಬಸಯ್ಯ ಆಲಿಮಟ್ಟಿ, ತೀರ್ಥ ರಾಮ ಸುಳ್ಯ, ರಮೇಶ್ ನಾಯಕ್ ರಾಯಿ, ಸುಜಾತಾ, ವಿಮಲ್ ಕುಮಾರ್ ಉಪಸ್ಥಿತರಿದ್ದರು.